ಎಂಆರ್‌ಐಟಿ ಕಾಲೇಜಿನ ವಿದ್ಯಾರ್ಥಿಗಳಿಂದ ರಕ್ತದಾನ

ಶಿಬಿರದಲ್ಲಿ ದಾನಿಗಳಿಂದ 117 ಯೂನಿಟ್‌ಸಂಗ್ರಹ
ತಾಲೂಕಿನ ಪಾಲಹಳ್ಳಿ ಗ್ರಾಮ ಸಮೀಪದ ಮೈಸೂರು ರಾಯಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು ಹಾಗೂ ಆಡಳಿತ ಸಿಬ್ಬಂದಿ ಸ್ವಯಂ ಪ್ರೇರಣೆಯಿಂದ ರಕ್ತದಾನ ನೀಡಿದರು.
ತಾಲೂಕಿನ ಪಾಲಹಳ್ಳಿ ಗ್ರಾಮ ಸಮೀಪದ ಮೈಸೂರು ರಾಯಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು ಹಾಗೂ ಆಡಳಿತ ಸಿಬ್ಬಂದಿ ಸ್ವಯಂ ಪ್ರೇರಣೆಯಿಂದ ರಕ್ತದಾನ ನೀಡಿದರು.
Published on: 

ಶ್ರೀರಂಗಪಟ್ಟಣ: ತಾಲೂಕಿನ ಪಾಲಹಳ್ಳಿ ಗ್ರಾಮ ಸಮೀಪದ ಮೈಸೂರು ರಾಯಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಎಂಆರ್‌ಐಟಿ ) ಕಾಲೇಜಿನಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ದಾನಿಗಳಿಂದ 117 ಯೂನಿಟ್ ರಕ್ತ ಸಂಗ್ರಹಿಸಲಾಯಿತು.

ತಾಲೂಕು ಆರೋಗ್ಯ ಇಲಾಖೆ, ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸಹಕಾರದೊಂದಿಗೆ ಗುರುವಾರ ಆಯೋಜಿಸಿದ್ದ ರಕ್ತ ದಾನ ಶಿಬಿರದಲ್ಲಿ ಎಂಆರ್‌ಐಟಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆಡಳಿತ ಸಿಬ್ಬಂದಿ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದರು. ಮಂಡ್ಯದ ಮಿಮ್ಸ್ ವೈದ್ಯರಾದ ಡಾ.ಪುಣ್ಯ ಹಾಗೂ ಡಾ.ಪೂಜಾ ಅವರ ನಿರ್ದೇಶನದಲ್ಲಿ ನರ್ಸಿಂಗ್ ಅಧಿಕಾರಿ ಮೊಹಮ್ಮದ್ ರಫಿ ಶಿಬಿರದ ನೇತೃತ್ವ ವಹಿಸಿದ್ದರು.

ಕಾಲೇಜಿನ ಪ್ರಾಂಶುಪಾಲ ಅಭಿನಂದನ್ ವಿದ್ಯಾರ್ಥಿಗಳ ಕುರಿತು ಮಾತನಾಡಿ, ರಕ್ತದಾನವು ಇನ್ನೊಬ್ಬರ ಜೀವಕ್ಕೆ ಮರುಜೀವ ನೀಡುವ ಅತ್ಯಂತ ಶ್ರೇಷ್ಠ ಮಾನವೀಯ ಸೇವೆ. ತುರ್ತು ಸಂದರ್ಭಗಳಲ್ಲಿ, ಅಪಘಾತಗಳಲ್ಲಿ, ಶಸ್ತ್ರಚಿಕಿತ್ಸೆಗಳ ವೇಳೆ ಅಥವಾ ತೀವ್ರ ರಕ್ತಹೀನತೆಯಿಂದ ಬಳಲುತ್ತಿರುವ ರೋಗಿಗಳಿಗೆ ಸರಿಯಾದ ಸಮಯಕ್ಕೆ ರಕ್ತ ದೊರೆತಲ್ಲಿ ಅನೇಕ ಜೀವಗಳನ್ನು ಉಳಿಸಬಹುದು. ಆರೋಗ್ಯವಂತ ವ್ಯಕ್ತಿಗಳು ಸ್ವಯಂಪ್ರೇರಿತವಾಗಿ ನೀಡುವ ರಕ್ತವೇ ಜೀವದಾನದ ಏಕೈಕ ಆಧಾರವಾಗಿದೆ. ವೈದ್ಯಕೀಯ ತಪಾಸಣೆಯ ನಂತರ ರಕ್ತದಾನ ಮಾಡಬಹುದು ಎಂದರು.

ಉಪಪ್ರಾಂಶುಪಾಲ ನಕುಲ್ ರಕ್ತದಾನ ನೀಡಿ ಬಳಿಕ ಮಾತನಾಡಿದರು. ಸಹಾಯಕ ಪ್ರಾಧ್ಯಾಪಕ ಎಂ.ಬಿ.ರಘು, ಸಾರ್ವಜನಿಕ ಆಸ್ಪತ್ರೆ ಪ್ರಯೋಗಾಲಯ ತಂತ್ರಜ್ಞೆ ಭಾನುಮತಿ ಇತರರು ಇದ್ದರು.