

ಹಲಗೂರು: ಸಮೀಪದ ಚೆನ್ನೀಪುರ ಗೇಟ್ ಬಳಿ ಗುರುವಾರ ಸಂಜೆ ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದು ಸವಾರ ಮೃತಪಟ್ಟಿದ್ದಾರೆ.
ಹುಲ್ಲಾಗಾಲ ಗ್ರಾಮದ ನಿವಾಸಿ ಈರಣ್ಣ(55) ಮೃತರು. ಇವರು ಸ್ಕೂಟರ್‌ನಲ್ಲಿ ಹಲಗೂರು ಕಡೆಯಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಚೆನ್ನೀಪುರ ಗೇಟ್ ಬಳಿ ತಿರುವು ಪಡೆಯುತ್ತಿದ್ದ ಸಂದರ್ಭದಲ್ಲಿ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್‌ನಿಂದ ಕೆಳಗೆ ಬಿದ್ದು ಗಾಯಗೊಂಡರು. ತಕ್ಷಣ ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.