ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಪಿ.ಎಲ್.ಆದರ್ಶ ಆಯ್ಕೆ

ಪಾಂಡವಪುರ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ(
pandavapura apmc
ಪಾಂಡವಪುರ ತಾಲೂಕು ಟಿಎಪಿಸಿಎಂಎಸ್ ಸಂಸ್ಥೆಯ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಪಿ.ಎಲ್.ಆದರ್ಶ ಅವರನ್ನು ನಿರ್ದೇಶಕರು, ಮುಖಂಡರು ಅಭಿನಂದಿಸಿದರು. ಪ್ರೇಮಾ ಕೆ.ಪುಟ್ಟೇಗೌಡ, ಚಿಕ್ಕಾಡೆ ಗಿರೀಶ್, ಸಿ.ಎಸ್.ಗೋಪಾಲಗೌಡ, ವಿ.ಎಸ್.ನಿಂಗೇಗೌಡ, ಎ.ಕೃಷ್ಣ, ಎಂ.ಸ್ವಾಮಿ ಇದ್ದರು.
Published on: 

ಪಾಂಡವಪುರ: ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ(ಟಿಎಪಿಸಿಎಂಎಸ್) ನೂತನ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಪಿ.ಎಲ್.ಆದರ್ಶ ಅವಿರೋಧ ಆಯ್ಕೆಯಾದರು.

ಚಿಕ್ಕಾಡೆ ಗಿರೀಶ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ಚುನಾವಣೆ ನಿಗದಿಯಾಗಿತ್ತು. ಅದರಂತೆ ಬುಧವಾರ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಪಿ.ಎಲ್.ಆದರ್ಶ ಹೊರತುಪಡಿಸಿ ಬೇರ‌್ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯೂ ಆದ ಸಂಘದ ಕಾರ್ಯದರ್ಶಿ ಭರತ್ ಕುಮಾರ್ ಆಯ್ಕೆ ಘೋಷಿಸಿದರು.

ಚುನಾವಣಾ ಪ್ರಕ್ರಿಯೆಯಲ್ಲಿ ರೈತಸಂಘ ಬೆಂಬಲಿತ ನಿರ್ದೇಶಕರು ಗೈರಾಗಿದ್ದರು. ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿಹಂಚಿ ಸಂಭ್ರಮಿಸಿದರು. ಅಧ್ಯಕ್ಷ ಪಿ.ಎಲ್.ಆದರ್ಶ ಅವರನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅಭಿನಂದಿಸಿದರು.

ಅಧ್ಯಕ್ಷ ಪಿ.ಎಲ್.ಆದರ್ಶ ಮಾತನಾಡಿ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರ ಆಶೀರ್ವಾದ ಹಾಗೂ ಎಲ್ಲ ನಿರ್ದೇಶಕರ ಸಹಕಾರದಿಂದ ಸಂಘದ ಅಧ್ಯಕ್ಷನಾಗಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರ ಪಡೆದು ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.

ಸಂಘದ ಉಪಾಧ್ಯಕ್ಷೆ ಪ್ರೇಮಾ ಕೆ.ಪುಟ್ಟೇಗೌಡ, ಮಾಜಿ ಅಧ್ಯಕ್ಷ ಚಿಕ್ಕಾಡೆ ಗಿರೀಶ್, ನಿರ್ದೇಶಕರಾದ ಸಿ.ಎಸ್.ಗೋಪಾಲಗೌಡ, ವಿ.ಎಸ್.ನಿಂಗೇಗೌಡ, ಎ.ಕೃಷ್ಣ, ಎಂ.ಸ್ವಾಮಿ, ಸಿ.ಎಂ.ಕಿರಣ್ ಕುಮಾರ್, ನರಸಿಂಹನಾಯ್ಕ ಹಾಜರಿದ್ದರು.