

ಶ್ರೀರಂಗಪಟ್ಟಣ: ಸಿಎಂ ಡಿ.ಕೆ ಶಿವಕುಮಾರ್ ಅವರಿಂದ ರಾಜ್ಯಮಟ್ಟದ ಪ್ರತಿಷ್ಠಿತ ಎನ್‌ಎಸ್‌ಎಸ್ ಸೇವಾ ಪ್ರಶಸ್ತಿಯನ್ನ ತಾಲೂಕಿನ ಬಾಬುರಾಯನ ಕೊಪ್ಪಲು ಗ್ರಾಮದ ಡಾ. ರಾಘವೇಂದ್ರ ಅವರಿಗೆ ನೀಡಿ ಗೌರವಿಸಿದೆ.
ಬೆಂಗಳೂರಿನ ಗಾಂಧಿ ಸ್ಮಾರಕ ಭವನದಲ್ಲಿ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಸಹಯೋಗದೊಂದಿದೆ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ. ರಾಘವೇಂದ್ರ ಅವರು ತಮ್ಮ ವೃತ್ತಿ ಹಾಗೂ ಪ್ರವೃತ್ತಿಯ ಮೂಲಕ ಸಲ್ಲಿಸಿರುವ ಹಲವಾರು ಸಮಾಜಮುಖಿ ಸೇವೆಗಳು, ಯುವಜನರಲ್ಲಿ ಮೂಡಿಸುತ್ತಿರುವ ಮಾನವೀಯ ಮೌಲ್ಯಗಳು, ಶಿಸ್ತು, ಉತ್ತಮ ಸಂಸ್ಕಾರ ಹಾಗೂ ಸಾಮಾಜಿಕ ಜವಾಬ್ದಾರಿಯ ಮನೋಭಾವವನ್ನು ಬೆಳೆಸುವಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ, ರಾಜ್ಯಮಟ್ಟದ ಎನ್‌ಎಸ್‌ಎಸ್ ಸೇವಾ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ಡಾ. ವೂಡೇ ಪಿ.ಕೃಷ್ಣ, ಶಾಸಕ ಹಾಗೂ ಗಾಂಧಿ ಭಾರತ ಶತಮಾನೋತ್ಸವ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ್, ಸಭಾಧ್ಯಕ್ಷ ಜಿ.ಎಸ್.ಪಾಟೀಲ್, ಸಚಿವ ರಿಜ್ವಾನ್ ಅರ್ಷದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಎಂ.ಎನ್ ಅನುಚೇತ್, ಕಾರ್ಯದರ್ಶಿ ಜೆ.ಮಂಜುನಾಥ್ ಸೇರಿದಂತೆ ಇತರರು ಇದ್ದರು.