ನವದೆಹಲಿಯಲ್ಲಿ ರಾಷ್ಟ್ರೀಯ ಸಾಂಸ್ಕೃತಿಕ ಮಹೋತ್ಸವಕ್ಕೆ ಚಾಲನೆ

ನವದೆಹಲಿಯಲ್ಲಿ ಕೆಂಪೇಗೌಡ ಫೌಂಡೇಷನ್ ವತಿಯಿಂದ ದಶಮಾನೋತ್ಸವ ಸಂಭ್ರಮ
ನವದೆಹಲಿಯಲ್ಲಿ ಕೆಂಪೇಗೌಡ ಫೌಂಡೇಷನ್ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಸಾಂಸ್ಕೃತಿಕ ಸಮಾರಂಭವನ್ನು ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು. ಡಾ. ಶ್ರೀ ನಂಜಾವಧೂತ ಸ್ವಾಮೀಜಿ, ಶ್ರೀ ಮಂಜುನಾಥ ಸ್ವಾಮೀಜಿ, ವಿ.ಸೋಮಣ್ಣ, ರೇಖಾ ಗುಪ್ತ ಇದ್ದರು.

Published on: 

ನಾಗಮಂಗಲ: ನವದೆಹಲಿಯಲ್ಲಿ ಕೆಂಪೇಗೌಡ ಫೌಂಡೇಷನ್ ವತಿಯಿಂದ ದಶಮಾನೋತ್ಸವ ಸಂಭ್ರಮ, ವಂದೇ ಮಾತರಂ 150ನೇ ವರ್ಷದ ಕಾರ್ಯಕ್ರಮ ಹಾಗೂ ರಾಷ್ಟೀಯ ಸಾಂಸ್ಕೃತಿಕ ಮಹೋತ್ಸವ ಸಮಾರಂಭವು ಭಾನುವಾರ ಸಂಜೆ ಬಹಳ ವಿಜೃಂಭಣೆಯಿಂದ ಜರುಗಿತು.

ತಾಲೂಕಿನ ಆದಿಚುಂಚನಗಿರಿ ಮಹಾ ಸಂಸ್ಥಾನಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥಸ್ವಾಮೀಜಿ ಅವರು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಕಾರ್ಯಕ್ರಮದಲ್ಲಿ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತ, ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥ ಸ್ವಾಮೀಜಿ, ಶಿರಾ ತಾಲೂಕಿನ ಸ್ಪಟಿಕಾಪುರಿ ಮಠದ ಪೀಠಾದ್ಯಕ್ಷ ಡಾ. ನಂಜಾವಧೂತ ಸ್ವಾಮೀಜಿ, ಬೆಂಗಳೂರು ಗೋಸಾಯಿ ಮಠದ ಮಂಜುನಾಥ ಸ್ವಾಮೀಜಿ, ಕೇಂದ್ರ ಸಚಿವ ವಿ. ಸೋಮಣ್ಣ, ಮಾಜಿ ಸಚಿವ ಸಿ.ಟಿ. ರವಿ, ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net