

ಮದ್ದೂರು: ಗಾಂಧಿ ಜಯಂತಿ ಅಂಗವಾಗಿ ವಿಧಾನ ಪರಿಷತ್ ಸದಸ್ಯ ಮಳವಳ್ಳಿ ಶಿವಣ್ಣ 50 ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಅನ್ನು ಬೆಂಗಳೂರಿನಲ್ಲಿ ಉಚಿತವಾಗಿ ವಿತರಿಸಿದರು.
ಇಂಜಿನಿಯರಿಂಗ್, ವೈದ್ಯಕೀಯ, ಬಿಸಿಎ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡುವ ಮೂಲಕ ಡಿಜಿಟಲ್ ಶಿಕ್ಷಣಕ್ಕೆ ಉತ್ತೇಜನ ನೀಡಲಾಗಿದೆ ಎಂದು ಶಿವಣ್ಣ ಹೇಳಿದರು.
ಪ್ರತಿಭೆಗೆ ಬಡತನ ಅಡ್ಡಿಯಾಗಬಾರದು ಎಂಬ ಆಶಯದೊಂದಿಗೆ ನಡೆದ ಈ ಕಾರ್ಯಕ್ರಮವು ವಿದ್ಯಾರ್ಥಿಗಳ ಶೈಕ್ಷಣಿಕ ಪಯಣಕ್ಕೆ ತಂತ್ರಜ್ಞಾನದ ಬಲ ನೀಡಿದೆ. ಆನ್‌ಲೈನ್ ತರಗತಿ, ಡಿಜಿಟಲ್ ಅಧ್ಯಯನ, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ, ಸಂಶೋಧನೆ ಹಾಗೂ ಉದ್ಯೋಗ ಕೌಶಲ ಅಭಿವೃದ್ಧಿಗೆ ನೆರವಾಗಲಿದೆ ಎಂದರು.
ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಖರೀದಿಸುವುದು ದೊಡ್ಡ ಸವಾಲಾಗಿರುವ ಸಂದರ್ಭದಲ್ಲಿ, ಅಗತ್ಯವಿರುವ ವಿದ್ಯಾರ್ಥಿಗಳನ್ನು ಗುರುತಿಸಿ ನೆರವು ನೀಡಲಾಗಿದೆ ಎಂದರು.