ಮಕ್ಕಳ ಹಕ್ಕುಗಳ ರಕ್ಷಣೆಗೆ ಜಾಗೃತಿ ಅಗತ್ಯ

ಜಿಲ್ಲಾ ಮಟ್ಟದ ಸಂಸತ್ ಸಭೆಯಲ್ಲಿ ವಿದ್ಯಾರ್ಥಿಗಳ ಅಭಿಮತ
ಸೋಮವಾರಪೇಟೆ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಮಕ್ಕಳ ಸಂಸತ್ ಕಾರ್ಯಕ್ರಮವನ್ನು ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಕೃಷ್ಣಪ್ಪ, ಶ್ರೀದೇವಿ ಇದ್ದರು.
ಸೋಮವಾರಪೇಟೆ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಮಕ್ಕಳ ಸಂಸತ್ ಕಾರ್ಯಕ್ರಮವನ್ನು ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಕೃಷ್ಣಪ್ಪ, ಶ್ರೀದೇವಿ ಇದ್ದರು.
Published on: 

ಸೋಮವಾರಪೇಟೆ: ಇಂದಿನ ಯುಗದಲ್ಲಿ ಮಕ್ಕಳು ಮಾದಕ ವ್ಯಸನಗಳ ದಾಸರಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಹೆಣ್ಣು ಮಕ್ಕಳ ಸುರಕ್ಷತೆಗೂ ಸವಾಲು ಎದುರಾಗಿದ್ದು, ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ರಾಜ್ಯಾದ್ಯಂತ ಹಮ್ಮಿಕೊಳ್ಳುವ ಅಗತ್ಯವಿದೆ ಎಂದು ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.

ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ, ರಾಜ್ಯ ಶಾಸಕರ ವೇದಿಕೆ, ಯುನಿಸೆಫ್, ಸಿಆರ್‌ಟಿ ಯೋಜನೆ ಹಾಗೂ ನಾವು ಪ್ರತಿಷ್ಠಾನ ಟ್ರಸ್ಟ್ ಸಹಯೋಗದಲ್ಲಿ ಸೋಮವಾರಪೇಟೆ ಪತ್ರಿಕಾಭವನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್ ಸಭೆಯಲ್ಲಿ ಮಕ್ಕಳು ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಂಡರು.

ಮಕ್ಕಳೊಂದಿಗೆ ಸಂವಾದ ನಡೆಸಿದ ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಕೊಡಗು ಜಿಲ್ಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದು, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಫಲಿತಾಂಶಗಳಲ್ಲೂ ಜಿಲ್ಲೆ ಉತ್ತಮ ಸ್ಥಾನ ಕಾಯ್ದುಕೊಂಡಿದೆ. ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದಲ್ಲ, ಉತ್ತಮ ಬದುಕು ರೂಪಿಸಿಕೊಳ್ಳುವ ಸಾಧನವಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಶಾಲೆಗಳಲ್ಲೂ ಯೋಗ ಮತ್ತು ಕರಾಟೆ ಶಿಕ್ಷಣ ದೊರೆಯುವಂತಾಗಬೇಕು ಎಂದರು.

ನಾವು ಪ್ರತಿಷ್ಠಾನದ ಕಾರ್ಯಕಾರಿ ಮಂಡಳಿ ನಿರ್ದೇಶಕಿ ಸುಮನಾ ಮ್ಯಾಥ್ಯೂ ಮಾತನಾಡಿ, ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್‌ನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ನ.19 ಮತ್ತು 20ರಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುವ ರಾಜ್ಯಮಟ್ಟದ ಮಕ್ಕಳ ಸಂಸತ್‌ನಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ ಎಂದು ತಿಳಿಸಿದರು.

ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಕೃಷ್ಣಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಮುಧೋಳ್, ನಿವೃತ್ತ ಉಪನ್ಯಾಸಕಿ ಎಂ.ಬಿ. ತಿಲೋತ್ತಮೆ, ರೈತ ಸಂಘದ ಜಿಲ್ಲಾ ಮುಖಂಡ ಜಿ.ಎಂ.ಹೂವಯ್ಯ ಇದ್ದರು.

ನಾವು ಪ್ರತಿಷ್ಠಾನದ ಸ್ಥಾಪಕ ಅಧ್ಯಕ್ಷ ಗೌತಮ್ ಕಿರಗಂದೂರು ಹಾಗೂ ಸಹನಾ ಕಾರ್ಯಕ್ರಮ ನಿರ್ವಹಿಸಿದರು.

ಚಿತ್ರ. 3ಠಿಣ1.