ವಿಜೃಂಭಣೆಯ ಲಕ್ಷ್ಮೀದೇವಿ ಜಾತ್ರೆ

ಜಾಗಟೆ ಮಲ್ಲೇನಹಳ್ಳಿ ಗ್ರಾಮದಲ್ಲಿ ಶ್ರೀ ಲಕ್ಷ್ಮೀದೇವಿ
Published on: 

ಪಾಂಡವಪುರ: ದೀಪಾವಳಿ ಹಬ್ಬದ ಅಂಗವಾಗಿ ತಾಲೂಕಿನ ಜಾಗಟೆ ಮಲ್ಲೇನಹಳ್ಳಿ ಗ್ರಾಮದಲ್ಲಿ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.

ಜಾಗಟೆ ಮಲ್ಲೇನಹಳ್ಳಿ, ಅರಳಕುಪ್ಪೆ, ಶ್ಯಾದನಹಳ್ಳಿ ಸೇರಿದಂತೆ ಸುತ್ತಲ ಗ್ರಾಮಗಳಿಂದ ಜನರು ಆಗಮಿಸಿ ದೇವಿ ದರ್ಶನ ಪಡೆದರು. ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮನ್‌ಮುಲ್ ನಿರ್ದೇಶಕ ಸಿ.ಶಿವಕುಮಾರ್, ಜಿಪಂ ಮಾಜಿ ಸದಸ್ಯ ಸಿ.ಅಶೋಕ್, ರೈತ ಮುಖಂಡರಾದ ಸುನೀತಾ ಪುಟ್ಟಣ್ಣಯ್ಯ ಪೂಜೆ ಸಲ್ಲಿಸಿದರು.

ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮಾತನಾಡಿ, ಶ್ರೀ ಲಕ್ಷ್ಮಿದೇವಿ ಜಾತ್ರಾ ಮಹೋತ್ಸವವು ಪ್ರತಿವರ್ಷ ದೀಪಾವಳಿ ಹಬ್ಬದಂದು ವಿಜೃಂಭಣೆಯಿಂದ ಜರುಗುತ್ತದೆ. ದೇವಿ ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ಹಾರೈಸಿದರು. ಜಾತ್ರಾ ಸಮಿತಿಯಿಂದ ಊಟದ ವ್ಯವಸ್ಥೆ ಮಾಡಲಾಗಿತ್ತು.