ಶ್ರೀರಂಗಪಟ್ಟಣವನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸಿ

ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ಗೆ ಎಚ್‌ಡಿಕೆ ಮನವಿ
ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಎಚ್.ಡಿ.ಕುಮಾರಸ್ವಾಮಿ ದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಎಚ್.ಡಿ.ಕುಮಾರಸ್ವಾಮಿ ದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
Published on: 

ಶ್ರೀರಂಗಪಟ್ಟಣ: ಸ್ವದೇಶ್ ದರ್ಶನ್ 2.0 ಯೋಜನೆಯಡಿ ಶ್ರೀರಂಗಪಟ್ಟಣವನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸುವಂತೆ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದರು.

ದೆಹಲಿಯಲ್ಲಿರುವ ಶೇಖಾವತ್ ಅವರ ಕಚೇರಿಯಲ್ಲಿ ಗುರುವಾರ ಭೇಟಿ ಆದ ಎಚ್‌ಡಿಕೆ, ಶ್ರೀರಂಗಪಟ್ಟಣ ಐಹಾಸಿಕವಾಗಿ ತಾಣ. ಇತಿಹಾಸ ಪ್ರಸಿದ್ಧ ಶ್ರೀರಂಗನಾಥ ಸ್ವಾಮಿ ಸನ್ನಿಧಿ ಸೇರಿದಂತೆ ಹಲವಾರು ದೇವಾಲಯ ಮತ್ತು ಪ್ರಸಿದ್ಧ ಪ್ರವಾಸಿ ತಾಣಗಳಿವೆ. ಇಂತಹ ಅಪರೂಪದ ತಾಣವನ್ನು ಪ್ರವಾಸೋದ್ಯಮ ಕೇಂದ್ರಿತ ತಾಣವನ್ನಾಗಿ ಅಭಿವೃದ್ಧಿಪಡಿಸಬೇಕು ಎಂದು ಕೋರಿದರು.

ಶೇಖಾವತ್ ಅವರಿಗೆ ಸಲ್ಲಿಸಲಾದ ವಿಸ್ತೃತ ಯೋಜನಾ ವರದಿ (ಡಿಪಿಆರ್) ಶ್ರೀರಂಗಪಟ್ಟಣದ ಶ್ರೀಮಂತ ಪರಂಪರೆ ಮತ್ತು ಪ್ರವಾಸೋದ್ಯಮ ಸಾಮರ್ಥ್ಯದ ಕೇಂದ್ರೀಕೃತ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡಿದೆ. ಕರ್ನಾಟಕದಲ್ಲಿ ಪ್ರವಾಸೋದ್ಯಮವನ್ನು ಬಲಪಡಿಸಲು ಕೇಂದ್ರದ ಬೆಂಬಲವನ್ನು ಕೋರಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.

ಮನವಿಗೆ ಶೇಖಾವತ್ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಆದ್ಯತೆ ಮೇರೆಗೆ ಪರಿಶೀಲಿಸಿ ಕ್ರಮ ವಹಿಸುವುದಾಗಿ ಭರವಸೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net