

ಮದ್ದೂರು: ಸ್ಥಳಿಯ ಸಂಘ-ಸಂಸ್ಥೆಗಳು ಸರ್ಕಾರದ ಇಲಾಖೆಗಳೊಂದಿಗೆ ಕೈಜೋಡಿಸಿ ಸಮಾಜಮುಖಿ ಕಾರ್ಯ ಕೈಗೊಳ್ಳಬೇಕು ಡಂದು ನಿವೃತ್ತ ಮುಖ್ಯಶಿಕ್ಷಕ ಶಿವಲಿಂಗಯ್ಯ ಸಲಹೆ ನೀಡಿದರು.
ತಾಲೂಕಿನ ಚಿಕ್ಕ ಅಂಕನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಡ್ಯಮೇರಾ ಭಾರತ್ ಕೇಂದ್ರ, ಮದ್ದೂರಿನ ವಿವೇಕಾನಂದ ಯುವ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘ, ಮನುಜ ಮತ ಸೇವಾ ಟ್ರಸ್ಟ್ ಹಾಗೂ ಕರ್ನಾಟಕ ಜಾನಪದ ಪರಿಷತ್ ವತಿಯಿಂದ ಸೋಮವಾರ ಆಯೋಜಿಸಿದ್ದ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಮೇರಾ ಭಾರತ್ ಕೇಂದ್ರ ಸ್ಥಳೀಯ ಸಂಘ ಸಂಸ್ಥೆಗಳನ್ನು ಬಳಸಿಕೊಂಡು ಯುವಜನರನ್ನು ನವ ಸಮಾಜದ ನಿರ್ಮಾಣಕ್ಕೆ ಕರೆದೊಯ್ಯುವ ಕೆಲಸ ಮಾಡುತ್ತಿರುವುದು ಶ್ಲಾಘನೀಯವಾಗಿದ್ದು, ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದರು.
ಮುಖ್ಯ ಶಿಕ್ಷಕ ಮೂಡಲಿಗೌಡಸ್ವಾಮಿ ಮಾತನಾಡಿದರು. ಕರ್ನಾಟಕ ಜಾನಪದ ಪರಿಷತ್ತಿನ ತಾಲೂಕು ಅಧ್ಯಕ್ಷ ಲಾರ ಪ್ರಸನ್ನ, ಸ್ವಾಮಿ ವಿವೇಕಾನಂದ ಯುವ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘದ ಅಧ್ಯಕ್ಷ ಪಿ.ಕಿಶನ್ಗೌಡ, ಶಿಕ್ಷಕರಾದ ಬೈರೇಗೌಡ, ಉಮೇಶ್, ಭಾರತಿ, ನವೀನ್ ಕುಮಾರ್, ನಾರಾಯಣ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.