ಸವಿ ನೆನಪುಗಳನ್ನು ಮೆಲುಕು ಹಾಕಿದ ಹಳೇ ವಿದ್ಯಾರ್ಥಿಗಳು

ವಿದ್ಯೆ ಕಲಿಸಿದ ಗುರುಗಳಿಗೆ ಸನ್ಮಾನ
ಬಳ್ಳೇಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಹಳೇ ವಿದ್ಯಾರ್ಥಿಗಳು ಶಿಕ್ಷಕರನ್ನು ಸನ್ಮಾನಿಸಿದರು. ಮುಖ್ಯ ಶಿಕ್ಷಕ ಗಿರೀಶ್, ಬಿ.ಆರ್.ವೆಂಕಟೇಶ್, ಡಿ.ಆರ್.ರಮೇಶ್, ನರಸಿಂಹಾಚಾರ್, ಶಿವಮೂರ್ತಿ, ಲೋಕೇಶ್, ಅಣ್ಣಪ್ಪ, ದೇವರಾಜು, ಎಸ್‌ಡಿಎಂಸಿ ಅಧ್ಯಕ್ಷ ರಮೇಶ್, ಪುಟ್ಟರಾಜು, ಕಾಂತರಾಜು, ಸಾಹಿರಾ ಭಾನು ಇತರರು ಇದ್ದರು.

Published on: 

ಕೆ.ಆರ್.ಪೇಟೆ: ತಾಲೂಕಿನ ಬೂಕನಕೆರೆ ಹೋಬಳಿಯ ಬಳ್ಳೇಕೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 2007-08ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಳೆಯ ವಿದ್ಯಾರ್ಥಿಗಳ ವತಿಯಿಂದ ಇತ್ತೀಚೆಗೆ ಗುರುವಂದನಾ ಕಾರ್ಯಕ್ರಮ ನಡೆಯಿತು.

ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ವಿವಿಧ ಕ್ಷೇತ್ರಗಳಲ್ಲಿ ತೊಡಗಿಕೊಂಡಿರುವ ಹಳೆಯ ವಿದ್ಯಾರ್ಥಿಗಳು ಶಿಕ್ಷಕರನ್ನು ಒಂದೆಡೆ ಸೇರಿಸಿ ಸನ್ಮಾನಿಸುವ ಮೂಲಕ ಗುರುಭಕ್ತಿ ಮೆರೆದರು.

ಈ ಸಂದರ್ಭದಲ್ಲಿ ಶಾಲಾ ದಿನಗಳ ಸವಿನೆನಪುಗಳನ್ನು ಮೆಲುಕು ಹಾಕಿ, ಜೀವನ ರೂಪಿಸುವಲ್ಲಿ ಶಿಕ್ಷಕರ ಮಾರ್ಗದರ್ಶನ ಹಾಗೂ ಶಿಸ್ತುಬದ್ಧ ಶಿಕ್ಷಣದ ಪಾತ್ರವನ್ನು ಹಳೆಯ ವಿದ್ಯಾರ್ಥಿಗಳು ಸ್ಮರಿಸಿದರು.

ಮುಖ್ಯ ಶಿಕ್ಷಕ ಗಿರೀಶ್ ಮಾತನಾಡಿ, ಹಲವು ವರ್ಷಗಳ ನಂತರವೂ ಗುರುಗಳನ್ನು ವಿದ್ಯಾರ್ಥಿಗಳು ನೆನಪಿಸಿಕೊಂಡು ಗೌರವ ಸಲ್ಲಿಸುತ್ತಿರುವುದು ಸಂತಸದ ಸಂಗತಿ. ಇಂತಹ ಕಾರ್ಯಕ್ರಮಗಳು ಗುರು-ಶಿಷ್ಯರ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವುದರ ಜತೆಗೆ ಇಂದಿನ ವಿದ್ಯಾರ್ಥಿಗಳಿಗೂ ಉತ್ತಮ ಸಂದೇಶ ನೀಡುತ್ತವೆ ಎಂದರು.

ಕಾರ್ಯಕ್ರಮದಲ್ಲಿ ಬಿ.ಆರ್.ವೆಂಕಟೇಶ್, ಡಿ.ಆರ್.ರಮೇಶ್, ನರಸಿಂಹಾಚಾರ್, ಶಿವಮೂರ್ತಿ, ಲೋಕೇಶ್, ಅಣ್ಣಪ್ಪ, ದೇವರಾಜು, ಎಸ್‌ಡಿಎಂಸಿ ಅಧ್ಯಕ್ಷ ರಮೇಶ್, ಪುಟ್ಟರಾಜು, ಕಾಂತರಾಜು, ಸಾಹಿರಾ ಭಾನು, ಎಚ್.ಆರ್.ರವಿಕುಮಾರ್, ಶ್ರೀನಿವಾಸ್, ನೇತ್ರಾವತಿ, ಜ್ಯೋತಿ, ನರಸಿಂಹಾಚಾರಿ, ರೇಖಾ, ನವೀನ್ ಕುಮಾರ್, ಸಿದ್ದಮಲ್ಲಪ್ಪ, ಚೆನ್ನವೀರೇಗೌಡ, ಹಳೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net