ಸಿಎಂ ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸಿ

ಶಾಸಕ ರಮೇಶ ಬಂಡಿಸಿದ್ದೇಗೌಡ ಮನವಿ
 ಬೆಳಗೊಳ ಗ್ರಾಮದ ಗ್ರಂಥಾಲಯದ ಆವರಣದಲ್ಲಿ ಶಾಸಕ ರಮೇಶ ಬಂಡಿಸಿದ್ದೇಗೌಡ ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿತ್ತು.
ಬೆಳಗೊಳ ಗ್ರಾಮದ ಗ್ರಂಥಾಲಯದ ಆವರಣದಲ್ಲಿ ಶಾಸಕ ರಮೇಶ ಬಂಡಿಸಿದ್ದೇಗೌಡ ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿತ್ತು.
Published on: 

ಕೆಆರ್‌ಎಸ್ : ಮಂಡ್ಯ ಜಿಲ್ಲೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸುವ ಹಿನ್ನೆಲೆಯಲ್ಲಿ ಗುರುವಾರ ಶಾಸಕ ರಮೇಶ ಬಂಡಿಸಿದ್ದೇಗೌಡ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆ ನಡೆಸಲಾಯಿತು.

ಬೆಳಗೊಳ ಗ್ರಾಮದ ಗ್ರಂಥಾಲಯದ ಆವರಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಶಾಸಕರು, ಅ.31ರಂದು ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಶ್ರೀರಂಗಪಟ್ಟಣ ಕ್ಷೇತ್ರದ ಅಭಿವೃದ್ಧಿ ಕಾಮಗಾರಿ ಜತೆ ವಿವಿಧ ಇಲಾಖೆಗಳ ಕಾರ್ಯಕ್ರಮಗಳನ್ನು ಉದ್ಘಾಟಿಸಲು ಆಗಮಿಸುತ್ತಿದ್ದಾರೆ. ಅಂದಿನ ಕಾರ್ಯಕ್ರಮಕ್ಕೆ ಜನಪ್ರತಿನಿಧಿ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು. ಈ ಮೂಲಕ ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಮೂರು ಬಸ್ ವ್ಯವಸ್ಥೆ ಮಾಡಲಾಗಿದ್ದು, ಸಂಬಂಧ ಪಟ್ಟ ಗ್ರಾಮಗಳಿಗೂ ಬಸ್ ವ್ಯವಸ್ಥೆ ಮಾಡಲಾಗಿದೆ. ಪಂಚಾಯಿತಿ ಮುಖಂಡರು, ಸೊಸೈಟಿ ಅಧ್ಯಕ್ಷರು, ನಿರ್ದೇಶಕರು ಜವಾಬ್ದಾರಿ ವಹಿಸಿಕೊಂಡು ಕಾರ್ಯಕರ್ತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆತರುವಂತೆ ಸೂಚನೆ ನೀಡಿದರು.

ಈ ಸಭೆಯಲ್ಲಿ ತಹಸೀಲ್ದಾರ್ ಚೇತನಾ ಯಾದವ್, ತಾಪಂ ಇಒ ಚಂದ್ರು ಸೇರಿದಂತೆ ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಪಂ ಪಿಡಿಒಗಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಮುಖಂಡರು ಇತರರು ಇದ್ದರು.