ಸಿದ್ದೇಗೌಡನದೊಡ್ಡಿಯಲ್ಲಿ ಬೋನಿಗೆ ಬಿದ್ದ ಚಿರತೆ

ಬೋನಿನಲ್ಲಿದ್ದ ನಾಯಿ ತಿನ್ನಲು ಬಂದು ಸೆರೆ
ಚಿರತೆ ಬೋನಿನಲ್ಲಿ ಸೆರೆಯಾಗಿರುವುದು.
ಚಿರತೆ ಬೋನಿನಲ್ಲಿ ಸೆರೆಯಾಗಿರುವುದು.
Published on: 

ಮದ್ದೂರು: ತಾಲೂಕಿನ ಆತಗೂರು ಹೋಬಳಿಯ ಸಿದ್ದೇಗೌಡನದೊಡ್ಡಿ ಗ್ರಾಮದಲ್ಲಿ ವರದರಾಜು ಅವರ ಜಮೀನಿನಲ್ಲಿ ಅಳವಡಿಸಿದ್ದ ಬೋನಿಗೆ ಮಂಗಳವಾರ ಬೆಳಗ್ಗೆ ಚಿರತೆ ಸೆರೆಯಾಗಿದೆ.

ಸುಮಾರು 3 ರಿಂದ 4 ವರ್ಷದ ಹೆಣ್ಣು ಚಿರೆತೆಯಾಗಿದ್ದು, ಗ್ರಾಮಸ್ಥರ ಒತ್ತಾಯದ ಮೇರೆಗೆ ಅರಣ್ಯಾಧಿಕಾರಿಗಳು ಬೋನು ಇಟ್ಟಿದ್ದರು. ಬೋನಿನಲ್ಲಿದ್ದ ನಾಯಿ ತಿನ್ನಲು ಬಂದು ಚಿರತೆ ಸೆರೆಯಾಗಿದೆ.

ಸ್ಥಳಕ್ಕೆ ತಾಲೂಕು ಅರಣ್ಯಾಧಿಕಾರಿ ಗವಿಯಪ್ಪ, ಉಪ ವಲಯ ಅರಣ್ಯಾಧಿಕಾರಿ ಸವಿತಾ, ಗಸ್ತು ಪಾಲಕ ಚಿನ್ನಪ್ಪ ಆಗಮಿಸಿ ಚಿರೆತೆಯನ್ನು ಮೇಲಧಿಕಾರಿಗಳ ಆದೇಶ ಪಡೆದ ನಂತರ ಬಂಡೀಪುರ ಅಥವಾ ನಾಗರಹೊಳೆ ಅರಣ್ಯ ಪ್ರದೇಶಕ್ಕೆ ಬಿಡಲು ಕ್ರಮ ಕೈಗೊಳ್ಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net