

ಮಳವಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ಸಂಭ್ರಮಾಚರಣೆಗೆ ಸೀಮಿತಗೊಳಿಸದೆ ಸೇವಾ ಚಟುವಟಿಕೆಗಳ ಮೂಲಕ ಆಚರಿಸುವುದು ನಮ್ಮ ಪಕ್ಷದ ಸಂಸ್ಕೃತಿ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಮಧು ಗಂಗಾಧರ್ ತಿಳಿಸಿದರು.
ತಾಲೂಕಿನ ಕಾಳಕೆಂಪನದೊಡ್ಡಿಯ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಸೇವಾ ಪರ್ವ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು, ಸ್ವಚ್ಛ ಭಾರತ್ ಬೂತ್ ಮಟ್ಟದಲ್ಲಿ ಅನುಷ್ಠಾನಗೊಳಿಸಬೇಕು ಎಂದು ಕರೆ ನೀಡಿದರು.
ಇದೇ ವೇಳೆ ನೂರಾರು ಬಿಜೆಪಿ ಕಾರ್ಯಕರ್ತರು ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಿ ಗಿಡಗಳನ್ನು ನೆಟ್ಟರು. ಕಾರ್ಯಕ್ರಮದಲ್ಲಿ ರಾಜ್ಯ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಎಚ್.ಆರ್.ಅಶೋಕ್‌ಕುಮಾರ್, ಜಿಲ್ಲಾ ಉಪಾಧ್ಯಕ್ಷ ವೈ.ಎಸ್. ಸಿದ್ದರಾಜು, ಜಿಲ್ಲಾ ಕಾರ್ಯದರ್ಶಿ ಶ್ರೀನಿವಾಸ್, ಮಾಧ್ಯಮ ಸಹ ಪ್ರಮುಖ್ ಶಿವಲಿಂಗಸ್ವಾಮಿ, ತಾಲೂಕು ಉಪಾಧ್ಯಕ್ಷ ಕೆ.ಸಿ. ನಾಗೇಗೌಡ, ಬೆಳಕವಾಡಿ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ವಕ್ಕರಹಳ್ಳಿ ಬಸವರಾಜು, ಮುಖಂಡರಾದ ಕೆ.ಸಿ.ದೇವರಾಜು, ರವಿ, ಶಶಿಕುಮಾರ್, ಅಂಚಿಪುರ ಅಶೋಕ್ ಇತರರಿದ್ದರು.