

ಕೆ.ಆರ್.ಸಾಗರ: ಕೆ.ಆರ್.ಸಾಗರದ ಬೃಂದಾವನದಲ್ಲಿ ಕಾವೇರಿ ನೀರಾವರಿ ನಿಗಮ ವತಿಯಿಂದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು.
ಗಾಂಧಿ ಕಾರಂಜಿ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಾಂಧಿ ಹಾಗೂ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ನಿಗಮದ ಕಾರ್ಯಪಾಲಕ ಇಂಜಿನಿಯರ್ ವೆಂಕಟರಮಣಪ್ಪ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಶ್ವೇತಾ, ಗಾಂಧಿ ಮತ್ತು ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಕಾರ್ಯಪಾಲಕ ಇಂಜಿನಿಯರ್ ವೆಂಕಟರವಣಪ್ಪ ಮಾತನಾಡಿ, ಗಾಂಧಿ ಅವರ ತತ್ವಗಳನ್ನು ಅಳವಡಿಸಿಕೊಳ್ಳಬೇಕು. ಇಂದಿನ ಆಧುನಿಕ ಯುಗದಲ್ಲಿ ಯುವ ಪೀಳಿಗೆ ಗಾಂಧಿ ಅವರನ್ನು ಸ್ಮರಿಸುತ್ತಿಲ್ಲ. ಹಾಗಾಗಿ ಮುಂದಿನ ಪೀಳಿಗೆಗೆ ಸ್ವಾತಂತ್ರೃ ಹೋರಾಟಗಾರರ ಬಗ್ಗೆ ತಿಳಿಸಬೇಕಾಗಿದೆ ಎಂದರು.
ನಿಗಮದ ಇಂಜಿನಿಯರ್‌ಗಳಾದ ಅಕಿಬ್ ಜಾವಿದ್, ಶಿವಕುಮಾರ್, ಅಭಿಲಾಷ್, ಸಚಿನ್, ಸಿಬ್ಬಂದಿ ನಾಗೇಶ್, ಅರವಿಂದ್, ಪ್ರಮೋದ್, ಶಿವಕುಮಾರ್, ಕೆಂಪರಾಜು, ಮಾಥ್ಯೂ ಇತರರಿದ್ದರು.