ಬೆಳಗಾವಿ ಮಂಗಾಯಿ ಜಾತ್ರೆಯಲ್ಲಿ ಗುಂಪು ಘರ್ಷಣೆ, ಕಲ್ಲು ತೂರಾಟ

belagavi feb 05 2020
Published on

ಬೆಳಗಾವಿ: ಮಂಗಾಯಿ ಜಾತ್ರೆ ಅಂಗವಾಗಿ ಏರ್ಪಡಿಸಿದ್ದ ಮಹಾಪ್ರಸಾದ ವಿತರಣೆ ವೇಳೆ ಮಂಗಳವಾರ ತಡರಾತ್ರಿ ಅನಗೋಳ‌ ಹಾಗೂ ಮಚ್ವೆ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಮಂಗಾಯಿ ಜಾತ್ರೆಯ ಹಿನ್ನೆಲೆಯಲ್ಲಿ ಅನಗೋಳದಲ್ಲಿ ಜಾತ್ರಾ ‌ಮಹೋತ್ಸವ ಆಯೋಜನೆ ಮಾಡಲಾಗಿತ್ತು.
ಎರಡು ಗುಂಪುಗಳ ನಡುವೆ ಜಗಳ ನಡೆದು ಏಕಾಏಕಿ ಕಲ್ಲು ತೂರಾಟ ನಡೆಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರ ಮೇಲೂ ದುಷ್ಕರ್ಮಿಕಗಳು ಕಲ್ಲು ತೂರಾಟ ನಡೆಸಿ ಹಲ್ಲೆ ಮಾಡಿದ್ದಾರೆ.

ಕಲ್ಲು ತೂರಾಟದಲ್ಲಿ ಗಾಯಗೊಂಡ ಪೊಲೀಸರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಅನಗೋಳ ಪ್ರದೇಶದಲ್ಲಿ ಪೊಲೀಸರು ಮೊಕ್ಕಾಂ‌ ಹೂಡಿದ್ದು, ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net