ಮಂಗಳಾದೇವಿ ವರ್ಷಾವಧಿ ಜಾತ್ರೋತ್ಸವ ಆರಂಭ

Mng-mar11-mangaladevi2
Published on

ಮಂಗಳೂರು: ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿ ಅವರ ನೇತೃತ್ವದಲ್ಲಿ ಶನಿವಾರ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆರಂಭಗೊಂಡಿತು.


ಪ್ರಾತಃಕಾಲ ಪೂಜೆ, ಬಿಂಬ ಶುದ್ಧಿ, ಕಲಶಾಭಿಷೇಕ, ಗಣಪತಿ ಹೋಮ, ಮಧ್ಯಾಹ್ನ ಮಹಾಪೂಜೆಯಾಗಿ ಧ್ವಜಾರೋಹಣ ನೆರವೇರಿತು. ಬಳಿಕ ಅನ್ನದಾನ ಸೇವೆ ನಡೆಯಿತು. ಸಂಜೆ ಬಯನ ಬಲಿ, ಮಹಾಪೂಜೆ, ಭೂತ ಬಲಿ ನಡೆಯಿತು.


ಮಾ.12ರಂದು ಪ್ರಾತಃಕಾಲ ಪೂಜೆ, ನವಕ ಕಲಶಾಭಿಷೇಕ, 108 ತೆಂಗಿನಕಾಯಿ ಗಣಹೋಮ, ಮಧ್ಯಾಹ್ನ ಮಹಾಪೂಜೆ, ಸಂಜೆ 6.30ಕ್ಕೆ ಬಯನ ಬಲಿ, ಮಹಾಪೂಜೆ, ಭೂತಬಲಿ, ನಡೆಯಲಿದೆ. 13ರಂದು ಪ್ರಾತಃಕಾಲ ಪೂಜೆ, ಗಣಹೋಮ, ನವಕ ಕಲಶಾಭಿಷೇಕ, ಮಧ್ಯಾಹ್ನ ಪೂಜೆ, 6.30ಕ್ಕೆ ಬಯನ ಬಲಿ, ಮಹಾಪೂಜೆ, ಭೂತಬಲಿ, 14ರಂದು ಚಂಡಿಕಾ ಹೋಮ, ಮಧ್ಯಾಹ್ನ ಮಹಾಪೂಜೆ, 6.30ಕ್ಕೆ ಬಯನ ಬಲಿ, ಮಹಾಪೂಜೆ, ಭೂತಬಲಿ ನಡೆಯಲಿದೆ. ಮಾ.15ರಂದು ಮಧ್ಯಾಹ್ನ 12ಕ್ಕೆ ಪೂಜೆಯಾಗಿ ರಥಾರೋಹಣ, ಸಂಜೆ 7ಕ್ಕೆ ರಥೋತ್ಸವ, ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ, ಶ್ರೀ ಭೂತಬಲಿ, ಕವಾಟ ಬಂಧನ, ಶಯನ ನೆರವೇರಲಿದೆ.

16ರಂದು ಬೆಳಗ್ಗೆ ಕವಾಟೋದ್ಘಾಟನೆ, ಅಭಿಷೇಕ ಪೂಜೆ, ಅಷ್ಟಾವದಾನ, ಮಧ್ಯಾಹ್ನ ಮಹಾಪೂಜೆ, ಸಂಜೆ 7ಕ್ಕೆ ಬಲಿ ಹೊರಟು, ಅವಭೃತ ಮಂಗಳ ಸ್ನಾನ, 17ರಂದು ಸಂಪ್ರೋಕ್ಷಣೆ, ರಾತ್ರಿ 9ಕ್ಕೆ ಕ್ಷೇತ್ರದ ಪರಿವಾರ ದೈವಗಳಿಗೆ ನೇಮ ನಡೆಯಲಿದೆ. ಜಾತ್ರಾ ಅವಧಿಯಲ್ಲಿ ಆಯೋಜಿಸಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾದಸ್ವರ ವಾದನ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net