19-21 ಮಂಗಳೂರಲ್ಲಿ ಲಿಟ್ ಫೆಸ್ಟ್ ಆರನೇ ಆವೃತ್ತಿ 2014

mng--17 Jan Lit Fest
Published on

ಮಂಗಳೂರು: ಭಾರತ್ ಫೌಂಡೇಶನ್ ನೇತೃತ್ವದಲ್ಲಿ ಆರನೇ ಆವೃತ್ತಿಯ ಲಿಟ್ ಫೆಸ್ಟ್ 2024 ಜ.19ರಿಂದ 21ರ ತನಕ ಮಂಗಳೂರಿನ ಟಿಎಂಎ ಪೈ ಇಂಟರ್ ನ್ಯಾಷನಲ್ ಕನ್ವೆನ್ಸನ್ ಸೆಂಟರ್‌ನಲ್ಲಿ ಜರುಗಲಿದೆ.


ಈ ಬಾರಿ ಒಟ್ಟು 29 ಪ್ರಸ್ತುತ ಉತ್ಸವವು ಹೊಂದಿದೆ. ಎರಡು ವೇದಿಕೆಗಳು ಮತ್ತು ಹರಟೆ ಕಟ್ಟೆ ಇವುಗಳಲ್ಲಿ 60ಕ್ಕೂ ಅಧಿಕ ಸಾಹಿತಿಗಳು, ವಾಗ್ಮಿಗಳು ಭಾಗವಹಿಸಲಿದ್ದಾರೆ. ಈ ಬಾರಿಯ ಲಿಟ್ ಫೆಸ್ಟ್ ಗೌರವಕ್ಕೆ ‘ವನಿತಾ ಸೇವಾ ಸಮಾಜ’ ಧಾರವಾಡ ಈ ಸಂಸ್ಥೆಯನ್ನು ಆಯ್ಕೆ ಮಾಡಲಾಗಿದೆ ಎಂದು ಭಾರತ್ ಫೌಂಡೇಶನ್ ಟ್ರಸ್ಟಿ ಸುನಿಲ್ ಕುಲಕರ್ಣಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.


19ರಂದು ಸಂಜೆ 5 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಯಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿ, ಹೆಸರಾಂತ ಕಲಾವಿದೆ ರಾಧೆ ಜಗ್ಗಿ, ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ವಿನಯ್ ಹೆಗ್ಡೆ, ಮಿಥಿಕ್ ಸೊಸೈಟಿಯ ಕಾರ್ಯದರ್ಶಿ ರವಿ ಮತ್ತು ವನಿತಾ ಸೇವಾ ಸಮಾಜ ಧಾರವಾಡ ಇದರ ಕಾರ್ಯದರ್ಶಿ ಮಧುರಾ ಹೆಗಡೆ ಅವರು ಭಾಗಿಯಾಗಲಿದ್ದಾರೆ. ಈ ಸಂದರ್ಭ 13 ಲೇಖಕರು ಬರೆದ ‘ದಿ ಐಡಿಯಾ ಆಫ್ ಭಾರತ್’ ಪುಸ್ತಕ ಬಿಡುಗಡೆಗೊಳ್ಳಲಿದೆ.


ಹೆಸರಾಂತ ಭರತನಾಟ್ಯ ಕಲಾವಿದೆ ರಾಧೆ ಜಗ್ಗಿ ( 19ರ ಸಾಯಂಕಾಲ) ಮತ್ತು ಶಾಸ್ತ್ರೀಯ ಸಂಗೀತ ಕಲಾವಿದರಾದ ಸಂದೀಪ್ ನಾರಾಯಣ್ ( 20ರ ಸಾಯಂಕಾಲ) ಕಾರ್ಯಕ್ರಮ ನಡೆಯಲಿದೆ.

  • ಈ ಬಾರಿಯ ವಿಶೇಷತೆ
    ಸಿನಿಮಾ ಪ್ರದರ್ಶನ, ಮಕ್ಕಳ ಸಾಹಿತ್ಯ ಅಭಿರುಚಿ ಮತ್ತು ಕಥೆಯ ಬಗ್ಗೆ ಪಾಲಕರಿಗೆ ಆಸಕ್ತಿ ಬೆಳೆಸುವ ದೃಷ್ಟಿಯಿಂದ ಕಾರ್ಕಳದ ವಂದನಾ ರೈ ಅವರಿಂದ ಮಕ್ಕಳಿಗಾಗಿ ‘ಚಿಣ್ಣರ ಅಂಗಳ’ ನಡೆಯಲಿದೆ. ಪುಸ್ತಕ ಮಳಿಗೆ, ತುಳು ಅಕ್ಷರ ಕಲಿಕಾ ಕಾರ್ಯಾಗಾರ, ಪ್ಲೇ ಮಾಡೆಲಿಂಗ್, ದೇಶೀ ಆಟಗಳು ಸೇರಿದಂತೆ ಲೇಖಕರು ಮತ್ತು ಪ್ರಮುಖರೊಂದಿಗೆ ಸಂವಾದ ಈ ಬಾರಿಯ ಲಿಟ್ ಫೆಸ್ಟ್‌ನ ವಿಶೇಷತೆಯಾಗಿದೆ.

  • ಸಾಹಿತ್ಯ ಲೋಕದ ಮೂರು ಸಾಧಕರು, ಕುವೆಂಪು, ಬೇಂದ್ರೆ ಮತ್ತು ಪಂಜೆ ಮಂಗೇಶರಾಯರ ಕುರಿತು ವಿಶೇಷ ಅವಧಿಗಳು ಜರುಗಲಿವೆ.
    ವಾಗ್ಮಿಗಳು, ಸಾಹಿತಿಗಳು, ಸಂಶೋಧಕರು, ವಿಷಯ ಪರಿಣಿತರು ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಇರಲಿದ್ದಾರೆ ಎಂದು ಭಾರತ್ ಫೌಂಡೇಶನ್‌ನ ಇನ್ನೋರ್ವ ಟ್ರಸ್ಟಿ ಶ್ರೀರಾಜ್ ಗುಡಿ ಹೇಳಿದರು.

  • ಫೌಂಡೇಶನ್ ಸದಸ್ಯರಾದ ಸುಜಿತ್ ಪ್ರತಾಪ್, ದುರ್ಗಾ ರಾಮದಾಸ್ ಕಟೀಲ್, ದಿಶಾ ಶೆಟ್ಟಿ, ಈಶ್ವರ್ ಶೆಟ್ಟಿ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net