

ಮಂಗಳೂರು: ಸಾಮಾಜಿಕ ಜಾಲತಾಣ ಮೂಲಕ ಯುವತಿಯರ ನಂಬರ್ ಪಡೆದು ಅವರ ಅಶ್ಲೀಲ ವಿಡಿಯೋ ಇರುವುದಾಗಿ ಬೆದರಿಸಿ ಹಣ ಪಡೆಯುತ್ತಿದ್ದ ಆರೋಪಿಯನ್ನು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ ಈದು ಗ್ರಾಮದ ಸತೀಶ್ ಹೊಸ್ಮಾರು (36) ಪ್ರಕರಣದ ಆರೋಪಿ.
ಪ್ರಕರಣ ವಿವರ: ಅಮಾಯಕ ಹುಡುಗಿಯರ ಮೊಬೈಲ್ ನಂಬರನ್ನು ಇನ್ಸ್ಟಾಗ್ರಾಂ, ೇಸ್ಬುಕ್ ಐಡಿ ಮೂಲಕ ಪಡೆದು ಅವರಿಗೆ ನಿಮ್ಮ ಅಶ್ಲೀಲ ವಿಡಿಯೋ ಇರುವುದಾಗಿ ಬೆದರಿಕೆ ಹಾಕುತ್ತಾನೆ. ಬಳಿಕ ನೀವು ಹಣ ನೀಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡುವುದಾಗಿ ಯುವತಿಯರಿಗೆ ಬೆದರಿಸುತ್ತಿದ್ದ ಬಗ್ಗೆ ಮಂಗಳೂರು ಪೂರ್ವ ಠಾಣೆಗೆ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಬಗ್ಗೆ ಕಾರ್ಯಾಚರಣೆ ನಡೆಸಿದ ಕದ್ರಿ ಠಾಣೆಯ ಪೊಲೀಸರು ಆರೋಪಿ ಸತೀಶ್ನನ್ನು ಮತ್ತು ಆತನ ಮೊಬೈಲ್ನ್ನು ವಶಕ್ಕೆ ಪಡೆದಿದ್ದಾರೆ. ಮೊಬೈಲ್ನಲ್ಲಿ ಸಂಬಂಧಪಟ್ಟ ದಾಖಲೆಗಳು ಲಭಿಸಿದೆ.
ಆರೋಪಿ ಮೇಲೆ ಈಗಾಗಲೇ ಕಾರ್ಕಳ ಗ್ರಾಮಾಂತರ ಮತ್ತು ನಗರ ಠಾಣೆಯಲ್ಲಿ ಕಳವು, ಮಹಿಳೆಯ ಮಾನಭಂಗ, ಅತ್ಯಾಚಾರ ಪ್ರಕರಣಗಳು ದಾಖಲಾಗಿದೆ. ಒಂದು ವರ್ಷದ ಹಿಂದೆ ಕಾರ್ಕಳ ನಗರ ಠಾಣೆಯಲ್ಲಿ ಕಳವು ಕೇಸಿನಲ್ಲಿ ಜೈಲು ಶಿಕ್ಷೆಯನ್ನು ಅನುಭವಿಸಿ ಬಂದಿದ್ದ.
ಮಂಗಳೂರು ಕದ್ರಿ ಪೊಲೀಸ್ ಠಾಣಾ ನಿರೀಕ್ಷಕ ಸೋಮಶೇಖರ್ ಜೆ.ಸಿ., ಪಿಎಸ್ಐ ಮನೋಹರ್ ಪ್ರಸಾದ್ ಮತ್ತು ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.