ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 10.54 ಲಕ್ಷ ರೂ. ಮೌಲ್ಯದ ಚಿನ್ನ ಅಕ್ರಮ ಸಾಗಾಟ ಪತ್ತೆ

crime
Published on


ಮಂಗಳೂರು: ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿರುವ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಆತನಿಂದ 10.54 ಲಕ್ಷ ರೂ. ಮೌಲ್ಯದ ಚಿನ್ನವನ್ನು ಪತ್ತೆ ಹಚ್ಚಿದ್ದಾರೆ.


ಸೆ.27ರಂದು ದುಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕನ ತಪಾಸಣೆಯ ವೇಳೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 24 ಕ್ಯಾರೆಟ್‌ನ 176 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ 10,54,240 ರೂ. ಎಂದು ಅಂದಾಜಿಸಲಾಗಿದೆ.
ಏರ್ ಪೋಡ್ಸ್, ಮೊಬೈಲ್, ವಾಚ್ ರೂಪದಲ್ಲಿ ಚಿನ್ನವನ್ನು ಸಾಗಾಟ ಮಾಡಲು ಯತ್ನಿಸಲಾಗಿತ್ತು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net