

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿತನಾಗಿ ಪೊಲೀಸ್ ಕಸ್ಟಡಿಯಲ್ಲಿದ್ದ ಬಾಂಗ್ಲಾ ಪ್ರಜೆ ಮಹಮ್ಮದ್ ಮಾಣಿಕ್‌ಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ದುಬೈಗೆ ಪ್ರಯಾಣಿಸಲೆಂದು ಅ.10ರಂದು ವಿಮಾನ ನಿಲ್ದಾಣಕ್ಕೆ ಬಂದಿದ್ದ ಮಹಮ್ಮದ್ ಮಾಣಿಕ್‌ನನ್ನು ಇಮಿಗ್ರೇಶನ್ ವಿಭಾಗದವರು ಪಾಸ್‌ಪೋರ್ಟ್ ಮತ್ತು ದಾಖಲಾತಿಗಳ ಪರಿಶೀಲನೆ ವೇಳೆ ಅನುಮಾನಗೊಂಡು ವಿಚಾರಣೆ ನಡೆಸಿದಾಗ ಆತ ಬಾಂಗ್ಲಾದೇಶದ ಪ್ರಜೆ ಎಂದು ಗೊತ್ತಾಗಿದೆ. ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದ ಪೊಲೀಸರು ಒಂದು ವಾರಗಳ ಕಾಲ ಕಸ್ಟಡಿಗೆ ಪಡೆದಿದ್ದರು. ಶುಕ್ರವಾರ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಂಡಿದ್ದು, ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.
ಪೊಲೀಸ್ ವಿಚಾರಣೆ ವೇಳೆ ಬಂಧಿತ ಮಹಮ್ಮದ್ ಮಾಣಿಕ್‌ನಿಂದ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.