ಅಂ.ರಾ. ವಿಮಾನ ನಿಲ್ದಾಣ 20 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಸಾಗಾಟ ಪತ್ತೆ

mng--8 Oct customs
Published on

ಮಂಗಳೂರು: ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ಒಟ್ಟು 20 ಲಕ್ಷ ರೂ. ಮೌಲ್ಯದ ಚಿನ್ನವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.


ಅ.6ರಂದು ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಮಂಗಳೂರಿಗೆ ಬರುತ್ತಿದ್ದ ಪ್ರಯಾಣಿಕನೋರ್ವ 24 ಕ್ಯಾರೆಟ್‌ನ 347 ಗ್ರಾಂ ಚಿನ್ನವನ್ನು ಬಿಳಿ ಪೌಡರ್ ರೂಪಕ್ಕೆ ಪರಿವರ್ತಿಸಿ 5 ಪ್ಯಾಕೆಟ್‌ಗಳಲ್ಲಿ ತುಂಬಿಸಿ ‘ಕಿಚನ್ ಟ್ರೆಸರ್ಸ್‌’ ಮತ್ತು ‘ಕೀರ್‌ಮಿಕ್ಸ್’ ಎಂಬ ಲೇಬಲ್ ಹಾಕಿ ಸಾಗಾಟ ಮಾಡುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net