ವಿಮಾನ ನಿಲ್ದಾಣದಲ್ಲಿ 40.40 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಸಾಗಾಟ ಪತ್ತೆ

mng-7 may Airport Gold
Published on

ಮಂಗಳೂರು: ದುಬಾನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೇ 5ರಂದು ಆಗಮಿಸಿದ ಪ್ರಯಾಣಿಕನೊಬ್ಬನಿಂದ ಕಳ್ಳಸಾಗಾಟ ಮಾಡುತ್ತಿದ್ದ 40,40,220 ರೂ. ಮೌಲ್ಯದ 24 ಕ್ಯಾರಟ್‌ನ 578 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಕಾಸರಗೋಡು ಜಿಲ್ಲೆ ಮೊಗ್ರಾಲ್ ಪುತ್ತೂರು ನಿವಾಸಿಯಾಗಿರುವ ಪ್ರಯಾಣಿಕ ಅಕ್ರಮವಾಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಕಳ್ಳ ಸಾಗಾಟಕ್ಕೆ ಯತ್ನಿಸಿದ್ದಾನೆ. ಅನುಮಾನದ ಮೇಲೆ ಆತನನ್ನು ತಪಾಸಣೆಗೆ ಒಳಪಡಿಸಿದಾಗ ಅವನ ದೇಹದಲ್ಲಿ 3 ಅಂಡಾಕಾರದ ವಸ್ತು ಪತ್ತೆಯಾಗಿದ್ದು, ಅದರಲ್ಲಿ ಚಿನ್ನವನ್ನು ಅಡಗಿಸಿಟ್ಟು ಸಾಗಾಟಕ್ಕೆ ಯತ್ನಿಸಿರುವುದು ಕಂಡು ಬಂದಿದೆ. ಪ್ರಯಾಣಿಕನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net