ಅಳಕೆ ವಾಣಿಜ್ಯ ಕಟ್ಟಡದಲ್ಲಿ ಬೆಂಕಿ ಅವಘಡ

mng-mar8-fire1
Published on

ಮಂಗಳೂರು: ನಗರದ ಅಳಕೆಯ ವಾಣಿಜ್ಯ ಕಟ್ಟಡವೊಂದರಲ್ಲಿ ಶನಿವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ.

ಕಟ್ಟಡದ ಎರಡನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಹೆಲ್ತ್ ಇಕ್ಯಪ್‌ಮೆಂಟ್ಸ್ ಮಾರಾಟ ಮಾಡುವ ಸಂಸ್ಥೆಯಲ್ಲಿ ಮಧ್ಯಾಹ್ನ 12.30ರ ವೇಳೆಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಸಂಸ್ಥೆಯಲ್ಲಿ ಸಂಗ್ರಹಿಸಿ ಇಡಲಾಗಿದ್ದ ಬೃಹತ್ ಪ್ರಮಾಣದ ಆರೋಗ್ಯ ಸಲಕರಣೆಗಳು ಬೆಂಕಿಗೆ ಆಹುತಿಯಾಗಿದೆ.

ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಪಾಂಡೇಶ್ವರ ಅಗ್ನಿಶಾಮಕ ದಳದ ತಂಡ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಘಟನೆ ಹಿನ್ನೆಲೆಯಲ್ಲಿ ಕಟ್ಟಡದಲ್ಲಿರುವ ಇತರ ಅಂಗಡಿಗಳವರನ್ನು ತೆರವು ಮಾಡಿ ಕಾರ್ಯಾಚರಣೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net