ಮಂಗಳೂರು ಮತ್ತು ಮಣಿಪಾಲದಲ್ಲಿ ಎಐ ಕ್ಷೇತ್ರದಲ್ಲಿ ಉದ್ಯೋಗ ಸಂದರ್ಶನ

yapika
Published on

ಮಂಗಳೂರು: ವೇಗವಾಗಿ ಬೆಳೆಯುತ್ತಿರುವ ಎಐ(ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ಕ್ಷೇತ್ರದಲ್ಲಿ ಉದ್ಯೋಗಾವಕಾಶ ಒದಗಿಸುವುದಕ್ಕಾಗಿ ಮಂಗಳೂರು ಮತ್ತು ಮಣಿಪಾಲದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು ಎಂದು ಬೆಂಗಳೂರಿನ ಯತಿಕಾರ್ಪ್ ಇಂಡಿಯಾ ಪ್ರೈ.ಲಿ.ನ ಸ್ಥಾಪಕ ಹಾಗೂ ಕಾರ್ಯನಿರ್ವಹಣಾಧಿಕಾರಿ ಯತೀಶ ಕೆ.ಎಸ್. ತಿಳಿಸಿದ್ದಾರೆ.

ಫೆ.12ರಂದು ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಹಾಗೂ ಫೆ.13ರಂದು ಮಣಿಪಾಲ ಮಾಹೆಯ ವಾಣಿಜ್ಯ ವಿಭಾಗದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ನಾಲ್ಕು ಹಂತಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಸಂದರ್ಶನಕ್ಕೆ ಆಗಮಿಸುವ ಅಭ್ಯರ್ಥಿಗಳು ರೆಸ್ಯೂಮ್, ಆಧಾರ್‌ಕಾರ್ಡ್ ದಾಖಲಾತಿಗಳನ್ನು ಕಡ್ಡಾಯವಾಗಿ ತರಬೇಕು. ಹೆಚ್ಚಿನ ಮಾಹಿತಿಗಾಗಿ ಡಿಡಿಡಿ.ಠಿಜ್ಚಿಟ್ಟ.್ಚಟಞ ಗೆ ಭೇಟಿ ನೀಡಬಹುದು. ಸುಮಾರು 1020 ಮಂದಿಗೆ ಉದ್ಯೋಗಾವಕಾಶ ಲಭ್ಯವಿದೆ ಎಂದವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಾಜೆಕ್ಟ್ ಮ್ಯಾನೇಜರ್ ಕೃಪಾ ಪ್ರಭು, ಎಚ್‌ಆರ್ ವಿಭಾಗದ ಭೂಮಿಕಾ ಪೂಜಾರಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net