

ಮಂಗಳೂರು: ದಕ್ಷಿಣ ಉಪ ವಿಭಾಗದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಆ್ಯಂಟಿ ಡ್ರಗ್ಸ್ ತಂಡವು ಭರ್ಜರಿ ಕಾರ್ಯಚರಣೆ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತಗಳನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಬಂಧಿಸಿದೆ.
ಶಿಶಿರ್ ದೇವಾಡಿಗ ಮತ್ತು ಸುಶಾನ್ ಎಲ್ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಬ್ಬರು ಬಿಳಿ ಸ್ವಿಫ್ಟ್ ಕಾರಿನಲ್ಲಿ ನಿಷೇಧಿತ 132 ಗ್ರಾಂ ಎಂಡಿಎಂ ಮತ್ತು 250 ಗ್ರಾಂ ಎಲ್ ಎಸ್ಟಿ ಸ್ಟ್ರಾಂಪ್ ಮಾದಕ ವಸ್ತುಗಳನ್ನ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ತಂಡ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ನಿರ್ದೇಶನದಂತೆ ಉಳ್ಳಾಲ ಠಾಣಾ ವ್ಯಾಪ್ತಿಯ ಸಂತೋಷ್ ನಗರ ಎಂಬಲ್ಲಿ ಆರೋಪಿಗಳನ್ನ ಬಂಧಿಸಿದ್ದಾರೆ. ಆರೋಪಿಗಳಲ್ಲಿದ್ದ 3,70,050 ರೂಪಾಯಿ ನಗದು, ಸ್ವಿಫ್ಟ್ ಕಾರು, ಮಾದಕ ವಸ್ತುಗಳು ಮತ್ತು ಮಾರಕಾಯುಧಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪಿಎಸ್‌ಐಗಳಾದ ಪುನೀತ್ ಗಾಂವ್‌ಕರ್, ಸಂತೋಷ್ ಕುಮಾರ್, ಸಿಬ್ಬಂದಿ ಸಾಜು ನಾಯರ್, ಮಹೇಶ್, ಶಿವಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.