

ಮಂಗಳೂರು: ನಿಷೇಧಿತ ಮಾದಕ ವಸ್ತು ಸೇವನೆ ಮಾಡಿದ ಮೂವರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.
ಗುರುವಾರ ಅಪರಾಹ್ನ ಅಶೋಕನಗರ ಬಸ್ ನಿಲ್ದಾಣದ ಬಳಿ ಮಾದಕ ವಸ್ತು ಸೇವನೆ ಮಾಡಿರುವ ರೀತಿಯಲ್ಲಿ ಪರಸ್ಪರ ವಾಗ್ವಾದ ನಡೆಸುತ್ತಿದ್ದ ಸತ್ಯಕಾನ್ ಕೇರಳ, ಆಲ್ಬಿನ್ ಥಾಮಸ್ ಮತ್ತು ಶರೋನ್ ಜೋಸೆಫ್ ಅವರನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಅವರು ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ.