ಸಂಸದ ಕ್ಯಾ.ಬ್ರಿಜೇಶ್ ಚೌಟರ ಮನವಿಗೆ ಸ್ಪಂದಿಸಿದ ರೈಲ್ವೆ ಸಚಿವಾಲಯ; ದೀಪಾವಳಿ ಹಬ್ಬಕ್ಕೆ ಮಂಗಳೂರು - ಬೆಂಗಳೂರು ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು

Screenshot_20241019_211908_Google
Published on

ಮಂಗಳೂರು: ರಾಜ್ಯ ರಾಜಧಾನಿಯಲ್ಲಿ ನೆಲೆಸಿರುವ ಕರಾವಳಿ ಭಾಗದ ಜನರು ದೀಪಾವಳಿ ಹಬ್ಬ ಸಂದರ್ಭ ಊರಿಗೆ ಆಗಮಿಸಿ ಮತ್ತೆ ಕೆಲಸದ ಪ್ರದೇಶಕ್ಕೆ ಮರಳಲು ಅನುಕೂಲವಾಗುವಂತೆ ಮಂಗಳೂರು- ಬೆಂಗಳೂರು ನಡುವೆ ವಿಶೇಷ ರೈಲು ವ್ಯವಸ್ಥೆ ಕಲ್ಪಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಮಾಡಿರುವ ಮನವಿಯನ್ನು ಪರಿಗಣಿಸಿ ರೈಲ್ವೆ ಸಚಿವಾಲಯವು ಹೊಸ ರೈಲು ಮಂಜೂರು ಮಾಡಿದೆ.
ಹುಬ್ಬಳ್ಳಿ-ಮಂಗಳೂರು ವಿಶೇಷ ರೈಲು (07311/ 07312) ನವೆಂಬರ್ 2 (ಶನಿವಾರ) ರಂದು ಸಂಜೆ 4ಕ್ಕೆ ಹುಬ್ಬಳ್ಳಿ ನಿಲ್ದಾಣದಿಂದ ಹೊರಟು ರಾತ್ರಿ 11.25 ಕ್ಕೆ ಯಶವಂತಪುರ ಮತ್ತು ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ತಲುಪಲಿದೆ.
ಈ ರೈಲು ಮಂಗಳೂರು- ಹುಬ್ಬಳ್ಳಿ(ನಂ.07312) ಮರುದಿನ ನವೆಂಬರ್ 3 ರಂದು ಮಂಗಳೂರಿನಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ರಾತ್ರಿ 10 ಗಂಟೆಗೆ ಯಶವಂತಪುರ ಮತ್ತು ಮರುದಿನ ಬೆಳಗ್ಗೆ 7 ಕ್ಕೆ ಹುಬ್ಬಳ್ಳಿ ತಲುಪಲಿದೆ.
ಕರಾವಳಿಯ ದೊಡ್ಡ ಸಂಖ್ಯೆಯ ಜನರು ಬೆಂಗಳೂರಿನಲ್ಲಿ ವಾಸಿಸುತ್ತಿದ್ದು, ಈ ಜನರು ದಸರಾ, ದೀಪಾವಳಿ ಮುಂತಾದ ಹಬ್ಬಗಳ ಸಂದರ್ಭ ಅಧಿಕ ಸಂಖ್ಯೆಯಲ್ಲಿ ಮಂಗಳೂರು ಮತ್ತು ಬೆಂಗಳೂರು ನಡುವೆ ಓಡಾಡುವುದು ಸಾಮಾನ್ಯ. ಹಬ್ಬದ ಅವಧಿಯಲ್ಲಿ ಪ್ರಯಾಣಿಕರ ದಟ್ಟಣೆ ಜಾಸ್ತಿಯಾಗಿ ಬಸ್‌ಗಳಲ್ಲಿ ಟಿಕೆಟ್ ಲಭಿಸದೆ ಊರಿಗೆ ಬಂದು ಹೋಗುವುದಕ್ಕೆ ಸಮಸ್ಯೆಯಾಗುತ್ತದೆ. ಆದ್ದರಿಂದ ಈ ಬೇಡಿಕೆ ಪೂರೈಸಲು ಸಾಧ್ಯವಾಗುವಂತೆ ದೀಪಾವಳಿ ಸಂದರ್ಭ ಪ್ರಸ್ತಾವಿತ ಉಭಯ ನಿಲ್ದಾಣಗಳ ನಡುವೆ ಸ್ಪೆಷಲ್ ರೈಲು ಒದಗಿಸುವಂತೆ ಸಂಸದರು
ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ತಮ್ಮೂರಿಗೆ ಪ್ರಯಾಣಿಸುತ್ತಾರೆ. ಆದರೆ, ಹಬ್ಬದ ಸೀಸನ್‌ನಲ್ಲಿ ಈಗಾಗಲೇ ಪ್ರಯಾಣಿಕರ ದಟ್ಟನೆ ಜಾಸ್ತಿಯಾಗಿ ಬಸ್‌ಗಳಲ್ಲಿ ಟಿಕೆಟ್ ಲಭಿಸದೆ ಊರಿಗೆ ಬಂದು ಹೋಗುವುದಕ್ಕೆ ಸಮಸ್ಯೆಯಾಗುತ್ತದೆ. ಹೀಗಾಗಿ, ದೀಪಾವಳಿ ಹಬ್ಬಕ್ಕೆ ಕರಾವಳಿ ಭಾಗದ ಜನರಿಗೆ ಅನುಕೂಲವಾಗುವಂತೆ ವಿಶೇಷ ರೈಲು ಸಂಚಾರದ ವ್ಯವಸ್ಥೆ ಮಾಡುವಂತೆ ಸಂಸದ ಕ್ಯಾ. ಚೌಟ ಅವರು ಮನವಿ ಮಾಡಿದ್ದರು.
ಮನವಿಗೆ ತುರ್ತು ಸ್ಪಂದನೆ ನೀಡಿದ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಕ್ಯಾ. ಚೌಟ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net