

ಮಂಗಳೂರು : ಮಂಗಳೂರು ವಕೀಲರ ಸಂಘದ ವತಿಯಿಂದ ದ.ಕ. ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಆಟಿದ ನೆಂಪು ಕಾರ್ಯಕ್ರಮ ಜರಗಿತು.
ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಮಾತನಾಡಿ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಇಂತಹ ಕಾರ್ಯಕ್ರಮ ನ್ಯಾಯವಾದಿಗಳಲ್ಲಿ ಸೌಹಾರ್ದ, ಶಿಸ್ತು ಹಾಗೂ ಒಗ್ಗಟ್ಟು ಮೂಡಿಸಲು ಸಹಕಾರಿಯಾಗುತ್ತದೆ ಎಂದರು.
ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಸವಣೂರು ವಿಶ್ವಜಿತ್ ಶೆಟ್ಟಿ, ರಾಜೇಶ್ ರೈ ಕಲ್ಲಂಗಳ , ಮಂಗಳೂರು ವಕೀಲರ ಸಂಘದ ಸದಸ್ಯ ಪಿ.ಪಿ.ಹೆಗ್ಡೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು
ವಕೀಲರ ಸಂಘದ ಅಧ್ಯಕ್ಷ ಎಚ್.ವಿ. ರಾಘವೇಂದ್ರ ವಹಿಸಿದ್ದರು. ಬರಹಗಾರ ಶಶಿರಾಜ್ ಕಾವೂರು ಅವರು ಆಟಿ ತಿಂಗಳ ವಿಶೇಷತೆಯ ಬಗ್ಗೆ ಮಾತನಾಡಿದರು. ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಶಶಿರಾಜ್ ಕಾವೂರು ಅವರನ್ನು ಇದೇ ಸಂದರ್ಭ
ಗೌರವಿಸಲಾಯಿತು. ಮಂಗಳೂರು ವಕೀಲರ ಸಂಘದ ಸದಸ್ಯರ ಮಕ್ಕಳಿಂದ ಹಾಗೂ ವಕೀಲರಿಂದ ತುಳುನಾಡ ಸಂಸ್ಕೃತಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.
ಸಂಘದ ಉಪಾಧ್ಯಕ್ಷ ಸುಜೀತ್ ಕುಮಾರ್, ಕೋಶಾಧಿಕಾರಿ ಗಿರೀಶ್ ಶೆಟ್ಟಿ, ಜತೆ ಕಾರ್ಯದರ್ಶಿ ಜ್ಯೋತಿ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಶ್ರೀಧರ್ ಹೊಸಮನೆ ವಂದಿಸಿದರು. ಮಯೂರ ಕೀರ್ತಿ ಕಾರ್ಯಕ್ರಮ ನಿರೂಪಿಸಿದರು.