ಕಲ್ಪನೆ ಟೆಂಪೋ ಡಿಕ್ಕಿ ಪಾದಾಚಾರಿ ಮೃತ್ಯು

mng--19 June Radakrishna rao
Published on

ಮಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಟೆಂಪೋ ಡಿಕ್ಕಿ ಹೊಡೆದು ಮಂಗಳೂರು ರಾಮಕ್ಷತ್ರಿಯ ಸೇವಾ ಸಂಘದ ಅಧ್ಯಕ್ಷ, ಬಿಕರ್ನಕಟ್ಟೆ ನಿವಾಸಿ ರಾಧಾಕೃಷ್ಣ ರಾವ್(65) ಅವರು ಮಂಗಳವಾರ ಮೃತಪಟ್ಟರು.


ಅವರು ಸಂಜೆ 5.45ರ ಸುಮಾರಿಗೆ ಕಲ್ಪನೆ ಕಡೆಯಿಂದ ಬಿಕರ್ನಕಟ್ಟೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕುಚಿಕಾಡು ಎಂಬಲ್ಲಿ ಟೆಂಪೋ ಢಿಕ್ಕಿ ಹೊಡೆಯಿತು. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ರಾತ್ರಿ 7.45ರ ಸುಮಾರಿಗೆ ಮೃತಪಟ್ಟರು.


ಮೆಸ್ಕಾಂ ಜೆಪ್ಪು ಶಾಖೆಯ ಕಿರಿಯ ಅಭಿಯಂತರರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಬಿಕರ್ನಕಟ್ಟೆಯ ಶ್ರೀ ಹರಿಹರ ಪಾಂಡುರಂಗ ವಿಟ್ಠಲ ಭಜನಾ ಮಂದಿರದ ಅಧ್ಯಕ್ಷರಾಗಿದ್ದರು. ಹಲವಾರು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು. ಅವರು ಪತ್ನಿ ನಿವೃತ್ತ ಶಿಕ್ಷಕಿ ಗೌರಿ ರಾಧಾಕೃಷ್ಣ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net