ಬೈಕ್ ಕಳವು ಆರೋಪಿ ಬಂಧನ

mng--23 Aug Shanize
Published on

ಮಂಗಳೂರು: ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


ತೊಕ್ಕೊಟ್ಟು ಕಾಫಿಕಾಡ್ 1ನೇ ಕ್ರಾಸ್ ನಿವಾಸಿ ಶನೀಝ್(23) ಬಂಧಿತ ಆರೋಪಿ. ನಗರದ ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಕಂಕನಾಡಿ ಮತ್ತು ಬೆಂದೂರ್ ವೆಲ್ ಪ್ರದೇಶಗಳಲ್ಲಿ ಕಳವಾಗಿದ್ದ ದ್ವಿಚಕ್ರ ವಾಹನಗಳ ಪತ್ತೆ ಬಗ್ಗೆ ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈತನಿಂದ ಸುಮಾರು 1.01 ಲ.ರೂ. ಮೌಲ್ಯದ 2 ದ್ವಿಚಕ್ರ ವಾಹನಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.


ನಗರದ ಪಂಪ್‌ವೆಲ್ ಮೇಲ್ಸೇತುವೆ ಬಳಿ ವಾಹನಗಳನ್ನು ಪರಿಶೀಲಿಸುತ್ತಿದ್ದಾಗ ನಂಬರ್‌ಪ್ಲೇಟ್ ಇಲ್ಲದ ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದವನನ್ನು ವಿಚಾರಣೆಗೊಳಪಡಿಸಿದಾಗ ಈತನ ಕೃತ್ಯ ಬಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net