ಮಂಗಳೂರಿನ ಸಿಎಆರ್ ಸಿಬ್ಬಂದಿ ಹೃದಯಾಘಾತಕ್ಕೆ ಬಲಿ

mng--3 Oct somana gowda chwdari
Published on

ಮಂಗಳೂರು: ನಗರ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ವಿಜಯಪುರ ಜಿಲ್ಲೆಯವರಾದ ಸೋಮನ ಗೌಡ ಚೌಧರಿ (31) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.


ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನಲ್ಲಿ ವಯರ್‌ಲೆಸ್ ವಿಭಾಗದ ಇನ್‌ಸ್ಪೆಕ್ಟರ್ ವಾಹನಕ್ಕೆ ಇವರು ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇನ್‌ಸ್ಪೆಕ್ಟರ್‌ಗೆ ಡೆಂೆ ಜ್ವರ ಬಾಧಿಸಿದ್ದರಿಂದ ನಗರದ ಫಳ್ನಿರ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ಮಂಗಳವಾರ ಬೆಳಗ್ಗೆ ಕರೆದುಕೊಂಡು ಹೋಗಿದ್ದರು. ಅಧಿಕಾರಿಯನ್ನು ಆಸ್ಪತ್ರೆ ಬಳಿ ಇಳಿಸಿ ವಾಹನ ಪಾರ್ಕ್ ಮಾಡಲು ಹೋದ ಸಂದರ್ಭ ಸೋಮನ ಗೌಡ ಏಕಾಎಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ಧಾವಿಸಿ 112ಕ್ಕೆ ಕರೆ ಮಾಡಿ ವೆನ್ಲಾಕ್ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದಾಗ ದಾರಿ ಮಧ್ಯೆ ಸಾವಿಗೀಡಾಗಿದ್ದಾರೆ.


ವಿವಾಹಿತರಾಗಿರುವ ಸೋಮನ ಗೌಡ ಕಳೆದ 7 ವರ್ಷಗಳಿಂದ ನಗರ ಸಶಸ್ತ್ರ ಮೀಸಲು ದಳದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net