

ಮಂಗಳೂರು: ನಗರದ ಅಡ್ಯಾರ್‌ಕಟ್ಟೆ ಮತ್ತು ಕುಂಟಿಕಾನ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಾದಕ ಸೇವನೆ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.
ಅಡ್ಯಾರ್‌ಕಟ್ಟೆ ಸಾರ್ವಜನಿಕ ಸ್ಥಳದಲ್ಲಿ ಯಾವುದೋ ಮಾದಕ ವಸ್ತು ಸೇವನೆ ಆರೋಪದ ಮೇಲೆ ಅಡ್ಯಾರ್‌ಪದವು ನಿವಾಸಿ ಮೊಹಮ್ಮದ್ ಅಶ್ರ್ (42) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಜೂ.21ರಂದು ಮದ್ಯಾಹ್ನ 3 ಗಂಟೆಗೆ ಆರೋಪಿ ಅಡ್ಯಾರ್‌ಕಟ್ಟೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡುತ್ತಿದ್ದ ಆರೋಪದ ಮೇಲೆ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಬಳಿಕ ಆತನನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ.
ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಕುಂಟಿಕಾನ ಸಾರ್ವಜನಿಕ ಸ್ಥಳದಲ್ಲಿ ಮಾದಕ ಸೇವನೆ ಆರೋಪದಲ್ಲಿ ಕೆಂಚನಕೆರೆ ಕಿಲ್ಪಾಡಿ ನಿವಾಸಿ ರಾಕೇಶ್ ರಾಜ್ ಎಂಬಾತನನ್ನು ಬಂಸಲಾಗಿದೆ.
ಜೂ.21ರಂದು ಸಂಜೆ 6ಗಂಟೆಗೆ ಕುಂಟಿಕಾನ ಬಳಿ ಸಾವಜನಿಕ ಸ್ಥಳದಲ್ಲಿ ರಾಕೇಶ್ ರಾಜ್ ಮಾದಕ ವಸ್ತು ಸೇವನೆ ಮಾಡಿದಂತೆ ಕಂಡು ಬಂದಿದ್ದು, ನಂತರ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮಾದಕ ಸೇವನೆಯನ್ನು ಒಪ್ಪಿಕೊಂಡಿದ್ದಾನೆ. ಇದಾದ ಬಳಿಕ ಆರೋಪಿಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದ್ದು, ಆರೋಪಿತನು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.
ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.