ಮಂಗಳೂರು ಗಾಂಜಾ ಸೇವನೆ ಮೂವರ ಬಂಧನ

drugs
Published on

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಸೇವನೆಗೆ ಸಂಬಂಧಿಸಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಪಡೀಲ್ ಕೊಡಕ್ಕಲ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ ಆರೋಪಿ ಶಾಜಿಲ್ ಎಂಬಾತನನ್ನು ಬಂಧಿಸಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಇದು ದೃಢಪಟ್ಟಿದೆ.

ಠಾಣಾ ವ್ಯಾಪ್ತಿಯ ಕೊಳಚಾರಗುಡ್ಡೆ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಇರ್ಫಾನ್ ಹ್ಯಾರಿಸ್ ಎಂಬಾತನ್ನು ಪೊಲೀಸರು ಬಂಧಿಸಿ, ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ.

ಪಂಪ್‌ವೆಲ್ ಸರ್ವಿಸ್ ರಸ್ತೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದ್ದ ಶಾನಿಫ್ ಎಂಬಾತನನ್ನು ಬಂಧಿಸಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ.

ಮೂವರು ಆರೋಪಿಗಳ ವಿರುದ್ಧವೂ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net