ದಲಿತ ಕಾಲನಿಗಳಲ್ಲಿ ಕುಂದು ಕೊರತೆ ಸಭೆ

mng--4 june dalith meeting
Published on

ಮಂಗಳೂರು: ದಲಿತ ಸಮುದಾಯದ ಸಮಸ್ಯೆಗಳನ್ನು ಆಲಿಸಿ, ಅದಕ್ಕೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಭಾನುವಾರ ದಲಿತ ಕಾಲನಿಗಳಲ್ಲಿ ನಗರ ಪೊಲೀಸರು ಸಭೆ ನಡೆಸಿದರು.


ನಗರದ ವಿವಿಧೆಡೆ ಒಟ್ಟು 17 ಸಭೆಗಳನ್ನು ನಡೆಸಲಾಯಿತು. ಇನ್ಸ್‌ಪೆಕ್ಟರ್ ಮತ್ತು ಅದಕ್ಕಿಂತ ಮೇಲಿನ ದರ್ಜೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶು ಕುಮಾರ್ ಅವರು ಭಾಗವಹಿಸಿದ್ದರು. ಇದೇ ವೇಳೆ ಪೊಲೀಸರು ಡ್ರಗ್ಸ್ ಬಗ್ಗೆ ಜಾಗೃತಿ ಮೂಡಿಸಿದರು. 112 ಸೇವೆಯ ಬಗ್ಗೆಯೂ ಮಾಹಿತಿ ನೀಡಿದರು.


ಸಭೆಗಳಲ್ಲಿ ಒಟ್ಟು 350ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದು ಸಭೆಯಲ್ಲಿ ಪ್ರಸ್ತಾಪವಾದ ಅಹವಾಲುಗಳ ಬಗ್ಗೆ ಒಂದು ವಾರದೊಳಗೆ ಕ್ರಮ ಕೈಗೊಳ್ಳಲಾಗುವುದು. ಇಂತಹ ಸಭೆಗಳನ್ನು ಪ್ರತೀ ತಿಂಗಳು ನಡೆಸಲು ಉದ್ದೇಶಿಸಲಾಗಿದೆ ಎಂದು ಅಂಶುಕುಮಾರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net