ದೇಶದ್ರೋಹದ ಭಾಷಣ ಮೂಲಕ ಸಮಾಜದಲ್ಲಿ ಶಾಂತಿ ಕೆಡಿಸುವಂತೆ ಪ್ರಚೋದಿಸಿದ ಆರೋಪ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ವಿರುದ್ಧ ಬರ್ಕೆ ಠಾಣೆಗೆ ದೂರು

crime
Published on

ಮಂಗಳೂರು: ದೇಶದ್ರೋಹದ ಭಾಷಣ ಮೂಲಕ ಸಮಾಜದಲ್ಲಿ ಶಾಂತಿ ಕೆಡಿಸುವಂತೆ ಪ್ರಚೋದಿಸಿದ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ವಿರುದ್ಧ ಪ್ರಕರಣ ದಾಖಲಿಸುವಂತೆ ಬರ್ಕೆ ಪೊಲೀಸರಿಗೆ ಅಭಿಲಾಷ್ ಶೆಟ್ಟಿ ಎಂಬವರು ದೂರು ನೀಡಿದ್ದಾರೆ.


ಐವನ್ ಡಿಸೋಜ ಅವರ ಭಾಷಣದಿಂದ ಪ್ರಚೋದನೆಗೊಂಡ ಕಾರ್ಯಕರ್ತರು ಅದೇ ಸಮಯದಲ್ಲಿ ಪಾಲಿಕೆಯ ಮುಂಭಾಗದಲ್ಲಿ ಚಲಿಸುತ್ತಿದ್ದ ಬಸ್‌ಗೆ ಕಲ್ಲು ಎಸೆದಿದ್ದಾರೆ. ಟಯರ್ ಹೊತ್ತಿಸುವ ಮೂಲಕ ಸಮಾಜದಲ್ಲಿ ಭಯದ ವಾತಾವರಣ ಮೂಡಿಸಿದ್ದಾರೆ. ರಾಜ್ಯಪಾಲರ ಹುದ್ದೆಯು ಸಾಂವಿಧಾನಿಕ ಹುದ್ದೆಯಾಗಿದ್ದು, ಸದರಿ ಹುದ್ದೆಗೆ ಅವಮಾನಿಸುವ ಮೂಲಕ ದೇಶದ್ರೋಹದ ಕೆಲಸ ಮಾಡಿದ್ದರಿಂದ ಹಾಗೂ ಪ್ರಚೋದನಾಕಾರಿ ಭಾಷಣದ ಮೂಲಕ ಸಮಾಜದ ಶಾಂತಿಯನ್ನು ಕೆಡಿಸುವ ಪ್ರಯತ್ನ ನಡೆಸಲಾಗಿದೆ. ಈ ಕಾರಣದಿಂದ ಐವನ್ ಡಿಸೋಜ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ದೂರಿನಲ್ಲಿ ಒತ್ತಾಯಿಸಲಾಗಿದೆ.


ಕಾನೂನು ತಜ್ಞರ ಸಲಹೆ: ದೂರು ಸ್ವೀಕರಿಸಿದ ಬರ್ಕೆ ಪೊಲೀಸ್ ಇನ್‌ಸ್ಪೆಕ್ಟರ್ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿಂಬರಹ ನೀಡಿದ್ದಾರೆ.


ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ಮುಖಂಡರಾದ ಶರಣ್ ಪಂಪ್‌ವೆಲ್, ಪುರುಷೋತ್ತಮ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net