ಅಧಿಕ ಲಾಭಾಂಶದ ಆಮಿಷ 10 ಲಕ್ಷ ರೂ. ವಂಚನೆ

Fruad
Published on

ಮಂಗಳೂರು: ಕ್ರಿಪ್ಟೊ ಕರೆನ್ಸಿಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭಾಂಶ ನೀಡುವುದಾಗಿ ಹೇಳಿ ವ್ಯಕ್ತಿಯೋರ್ವರಿಗೆ 10 ಲಕ್ಷ ರೂ. ವಂಚಿಸಲಾಗಿದೆ.


ದೂರುದಾರರು 2023ರ ನವೆಂಬರ್‌ನಲ್ಲಿ ಓಶಿಯನ್ ಫೈನಾನ್ಸ್ ಅಕಾಡೆಮಿ ಎಂಬ ಕಂಪೆನಿಯ ವೆಬ್‌ಸೈಟ್‌ನಲ್ಲಿ ಕಿೆರ‌್ಟೃ ಕರೆನ್ಸಿಯ ಬಗ್ಗೆ ಆನ್‌ಲೈನ್‌ನಲ್ಲಿ ತರಬೇತಿ ಪಡೆದಿದ್ದರು. ಆಗ ಕಂಪೆನಿಯವರು ದೂರುದಾರರ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಸಂಖ್ಯೆ ಪಡೆದುಕೊಂಡು ಕ್ರಿಪ್ಟ್ ಕರೆನ್ಸಿಯ ವೆಬ್‌ಸೈಟ್‌ನ್ನು ಪರಿಚಯಿಸಿದರು. ಅನಂತರ ಅಡ್ಮಿರ್ ಕಾದಿರ್ ಎಂದು ಪರಿಚಯಿಸಿಕೊಂಡ ವ್ಯಕ್ತಿ ಆನ್‌ಲೈನ್ ಮೂಲಕ ಮೆಸೇಜ್ ಮಾಡಿ ಹಣ ಹೂಡುವಂತೆ ತಿಳಿಸಿದ. ಅದರಂತೆ ದೂರುದಾರರು 12,500 ರೂ.ಗಳನ್ನು ಹೂಡಿಕೆ ಮಾಡಿದ್ದರು. ಅದರ ಲಾಭಾಂಶವೆಂದು 46,000 ರೂ.ಗಳನ್ನು ದೂರುದಾರರ ಖಾತೆಗೆ ಕಳುಹಿಸಲಾಗಿತ್ತು.

ಅನಂತರ ಆರೋಪಿಗಳು 2024ರ ಮೇ ತಿಂಗಳಲ್ಲಿ ಮೆಸೇಜ್ ಮಾಡಿ ಕ್ರಿಪ್ಟೊ ಕರೆನ್ಸಿಯಲ್ಲಿ ಒಳ್ಳೆಯ ಲಾಭವಿದೆ ಎಂದು ನಂಬಿಸಿ ಕಾಯಿನ್ ಖರೀದಿಸುವಂತೆ ತಿಳಿಸಿದರು. ಮೇ 13ರಂದು ಎರಡು ಕಾಯಿನ್‌ಗಳಿಗೆ ತಲಾ 5 ಲ.ರೂ.ಗಳಂತೆ ಒಟ್ಟು 10 ಲಕ್ಷ ರೂ.ಗಳನ್ನು ವರ್ಗಾಯಿಸಿಕೊಂಡಿದ್ದರು. ಅನಂತರ ಯಾವುದೇ ಹಣ ವಾಪಸ್ ನೀಡದೆ ವಂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net