ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಮಾಲೋಚನಾ ಸಭೆ

mng--1 Jan SDM sammelana
Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ 27ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ನಡೆಸುವ ಕುರಿತು ಸಮಾಲೋಚನಾ ಸಭೆಯು ನಗರದ ಎಸ್.ಡಿ.ಎಂ ಕಾನೂನು ಮಹಾವಿದ್ಯಾಲಯದಲ್ಲಿ ನಡೆಯಿತು.

ರವೀಂದ್ರ ರೈ ಕಲ್ಲಿಮಾರು, ಅಚ್ಚುತ ಗಟ್ಟಿ, ಸುರೇಂದ್ರ ರೈ, ಭಾಸ್ಕರ ರೈ ಕುಕ್ಕುವಳ್ಳಿ, ರವೀಂದ್ರ ಶೆಟ್ಟಿ ಉಳಿದೊಟ್ಟು, ಕಲ್ಲಚ್ಚು ಪ್ರಕಾಶನದ ಮಹೇಶ ಆರ್ ನಾಯಕ್, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ, ಉಳ್ಳಾಲ ತಾಲ್ಲೂಕು ಹೋಬಳಿ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮಿ ರೈ ಕಲ್ಲಿಮಾರು ಅನಿಸಿಕೆ ವ್ಯಕ್ತಪಡಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಎಂ.ಪಿ. ಶ್ರೀನಾಥ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ವಿನಯ ಆಚಾರ್ಯ ಎಚ್. ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಪುಷ್ಪರಾಜ್ ಕೆ. ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net