ಮಾದಕ ವಸ್ತು ಸೇವನೆ ನಾಲ್ವರ ಬಂಧನ

drugs
Published on

ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪಣಂಬೂರು, ಕೆಎಸ್‌ಆರ್‌ಟಿಸಿ, ವಳಚ್ಚಿಲ್ ಸಮೀಪ ಮಾದಕ ವಸ್ತು ಸೇವನೆ ಆರೋಪದಲ್ಲಿ 4 ಮಂದಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ.


ಜ.17ರಂದು ಜೋಕಟ್ಟೆ ಕ್ರಾಸಿನ ಬಳಿ ಮಾದಕ ಅಮಲಿನಲ್ಲಿದಂತೆ ಕಂಡು ಬಂದ ಗುರುದೀಪ್ ಸಿಂಗ್ (23) ಮತ್ತು ರಾಹುಲ್ (24) ಎಂಬವರನ್ನು ಪಣಂಬೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ವೈದ್ಯಕೀಯ ಪರೀಕ್ಷೆ ನಡೆಸಿದಾಗ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಆರೋಪಿ ವಿರುದ್ಧ ಪಣಂಬೂರು ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯಿದೆ-1985ರ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.


ಜ.17ರಂದು ನಗರದ ಕೆಎಸ್‌ಆರ್‌ಟಿಸಿ ಬಸ್ ತಂಗುದಾಣದ ಬಳಿ ವ್ಯಕ್ತಿಯೊಬ್ಬ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದ. ಈ ಬಗ್ಗೆ ಸೆನ್ ಪೊಲೀಸರು ದಾಳಿ ನಡೆಸಿ ಅಜ್ಜಿನಡ್ಕ ಬದ್ರಿಯಾನಗರ ನಿವಾಸಿ ಕೆ.ಪಿ. ಹೈದರ್ ಆಲಿ ಮೊಹಮ್ಮದ್ (53) ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ಆರೋಪಿಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಮಾದಕ ಸೇವನೆ ಮಾಡಿರುವುದು ದೃಢಪಟ್ಟಿದೆ. ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ನಗರದ ಹೊರವಲಯದ ವಳಚ್ಚಿಲ್ ಬಳಿ ಮಾದಕ ವಸ್ತು ಸೇವನೆ ಆರೋಪದಲ್ಲಿ ಅಡ್ಯಾರ್ ಮಸೀದಿ ಬಳಿ ನಿವಾಸಿ ಮಹಮ್ಮದ್ ಮನಾಜ್ (20) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.


ಜ.17ರಂದು ಈತ ವಳಚ್ಚಿಳ್ ಜಂಕ್ಷನ್‌ನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುವಾದ ಗಾಂಜಾ ಸೇವನೆ ಮಾಡುತ್ತಿದ್ದ. ಆರೋಪಿಯನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಆರೊಪಿ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net