

ಮಂಗಳೂರು: ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕ ಪ್ರದೇಶದಲ್ಲಿ ತೂರಾಡುತ್ತಿದ್ದ ಇಬ್ಬರನ್ನು ಬರ್ಕೆ ಮತ್ತು ಉರ್ವ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಲಾಲ್ಬಾಗ್ ಬಳಿ ಅಮಲು ಪದಾರ್ಥ ಸೇವನೆ ಮಾಡಿ ತೂರಾಡುತ್ತಿದ್ದ ಕಾಸರಗೋಡು ಜಿಲ್ಲೆ ಹೊಸದುರ್ಗ ಕಡಪುರಂ ನಿವಾಸಿ ಅಜಾಸ್ ಕೆ. (20) ಎಂಬವನನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಟೆಟ್ರಾಹೈಡ್ರಾಕೆನಬಿನಾಯ್ಡಾ ಎನ್ನುವ ಮಾದಕ ವಸ್ತು ಸೇವೆ ಮಾಡಿರುವುದು ದೃಢಪಟ್ಟಿದೆ. ಎನ್ಡಿಪಿಎಸ್ ಕಾಯ್ಡೆಯಡಿ ಪ್ರಕರಣ ದಾಖಲಿಸಲಾಗಿದೆ.
ಚಿಲಿಂಬಿಗುಡ್ಡೆ ಮೈದಾನದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಸಿಗರೇಟು ಸೇದುತ್ತಿದ್ದ ಕಲ್ಬಾವಿ ರೋಡ್ ಸಂಕಪ್ಪ ಕಂಪೌಂಡ್ ನಿವಾಸಿ ಪ್ರೀತಂ ಯಾನೆ ಅಭಿ (33) ಎಂಬಾತನನ್ನು ಉರ್ವ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದಾಗ ಆತ ಗಾಂಜಾ ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ. ಆತನ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.