ಮಾದಕವಸ್ತು ಎಂಡಿಎಂಎ ಮಾರಾಟ ಆರೋಪಿ ಬಂಧನ

mng--20 Oct Abdul Aziz
Published on

ಮಂಗಳೂರು: ನಗರದಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಉಳ್ಳಾಲ ನರಿಂಗಾನ ತೌಡುಗೋಳಿ ಕ್ರಾಸ್‌ನ ಅಬ್ದುಲ್ ಅಜೀಜ್ ಆಲಿಯಾಸ್ ಪೋಕರ್ ಅಜೀಜ್(42)ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.


ಆರೋಪಿಯ ವಶದಿಂದ ಒಟ್ಟು 26 ಗ್ರಾಂ ತೂಕದ 1.30 ಲ.ರೂ. ಮೌಲ್ಯದ ಎಂಡಿಎಂಎ, ಕಾರು, 2 ಮೊಬೈಲ್ ೆನ್‌ಗಳು, ಡಿಜಿಟಲ್ ತೂಕಮಾಪನ ಸೇರಿದಂತೆ ಒಟ್ಟು 6,41,500 ರೂ. ಅಂದಾಜು ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರೆದಿದೆ.


7 ಪ್ರಕರಣಗಳ ಆರೋಪಿ
ಈತನ ವಿರುದ್ದ ಈ ಹಿಂದೆ ಉಳ್ಳಾಲ, ಕೊಣಾಜೆ ಮತ್ತು ಕಾವೂರು ಪೊಲೀಸ್ ಠಾಣೆಯಲ್ಲಿ ಒಟ್ಟು 7 ಮಾದಕವಸ್ತು ಮಾರಾಟ ಪ್ರಕರಣಗಳು ದಾಖಲಾಗಿವೆ. ಈತ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದಾಗ ಅಲ್ಲಿನ ಕಾರಾಗೃಹ ಸಿಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net