ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

sucide
Published on


ಮಂಗಳೂರು: ನಗರದಲ್ಲಿ ವ್ಯಾಸಾಂಗ ಮಾಡುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಬುಧವಾರ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.


ಉಡುಪಿ ಮೂಲದ ನಿತೇಶ್ ರಾವ್(20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಇಲ್ಲಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದಲ್ಲಿ ಓದುತ್ತಿದ್ದ. ಬೀಬಿ ಆಲಾಬಿ ರಸ್ತೆಯಲ್ಲಿರುವ ಹಿಂದುಳಿದ ವರ್ಗದ ಸರ್ಕಾರಿ ಹಾಸ್ಟೆಲ್‌ನ ರೂಮ್‌ನಲ್ಲಿ ನೇಣು ಬಿಗಿದುಕೊಂಡಿದ್ದಾನೆ. ಬೆಳಗ್ಗೆ 10.30ರ ವೇಳೆಗೆ ಘಟನೆ ಬೆಳಕಿಗೆ ಬಂದಿದೆ. ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾನೆ. ತಂದೆ 5 ವರ್ಷದ ಹಿಂದೆ ನಿಧನರಾಗಿದ್ದರು. ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net