ಮಂಗಳೂರು ಗಲಭೆ ವಿಚಾರದಲ್ಲಿ ಮಾಜಿ ಸಿಎಂ ಎಚ್​ಡಿಕೆ ವರ್ತನೆ ಸರಿಯಿಲ್ಲ: ಸಚಿವ ಜಗದೀಶ ಶೆಟ್ಟರ್ ವಾಗ್ದಾಳಿ

Jagadishshettar11a
Published on

ಹುಬ್ಬಳ್ಳಿ: ಮಂಗಳೂರು ಗಲಭೆ ವಿಚಾರವಾಗಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪೊಲೀಸರ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಸಚಿವ ಜಗದೀಶ ಶೆಟ್ಟರ್ ವಾಗ್ದಾಳಿ ನಡೆಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ಗಲಭೆ ವಿಚಾರ ವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವ ಕುಮಾರಸ್ವಾಮಿ ವಿಡಿಯೋ ಬಿಡುಗಡೆ ಮಾಡುವ ಮೂಲಕ ಪೊಲೀಸರ ನೈತಿಕತೆಯನ್ನು ಪ್ರಶ್ನಿಸಿದ್ದಾರೆ. ಈ ಬಗ್ಗೆ ಗೃಹ ಸಚಿವರು ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ಮಹದಾಯಿ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ಮೇಲೆ ಆರೋಪ ಮಾಡುತ್ತಿರುವುದು ಸರಿಯಲ್ಲ. ಈ ವಿಚಾರದಲ್ಲಿ ಸರ್ವ ಪಕ್ಷ ಮುಖಂಡರು ಸಕಾರಾತ್ಮಕವಾಗಿ ನಡೆದುಕೊಂಡರೆ ಸಮಸ್ಯೆ ಇತ್ಯರ್ಥವಾಗಲಿದೆ ಎಂದು ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆ ಕುರಿತು ಸಿಎಂ ಯಡಿಯೂರಪ್ಪ ಕೇಂದ್ರ ಸರ್ಕಾರದ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಿದ್ದಾರೆ. ಲಿಂಗಾಯತ ಸಚಿವರನ್ನು ಸಂಪುಟದಿಂದ ಕೈಬಿಡುವಂತಹ ಆಧಾರ ರಹಿತ ಊಹಾಪೋಹಗಳಿಗೆ ನಾನು ಉತ್ತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net