ಪೊಲೀಸ್ ಅಧಿಕಾರಿ ಸೋಗಿನಲ್ಲಿ ವಂಚನೆ ಪಿಎಸ್‌ಐ ಸಮವಸ್ತ್ರ, ಐಡಿ ಕಾರ್ಡ್ ವಶ

mng--20 Aug Benedict saboo
Published on

ಮಂಗಳೂರು: ಪೊಲೀಸ್ ಅಧಿಕಾರಿ ಸೋಗಿನಲ್ಲಿ ವಂಚಿಸಲು ಯತ್ನಿಸುತ್ತಿದ್ದ ನಗರದ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ, ಕೇರಳದ ಇಡುಕ್ಕಿಯ ಬೆನೆಡಿಕ್ಟ್ ಸಾಬೂ (25) ಎಂಬಾತನನ್ನು ಉರ್ವ ಪೊಲೀಸರು ಶನಿವಾರ ಬಂಧಿಸಿದ್ದಾರೆ.


ಆರೋಪಿಯಿಂದ ಕೇರಳ ಸ್ಟೇಟ್ ಪೊಲೀಸ್ ಮತ್ತು ಕೃಷಿ ಅಧಿಕಾರಿಯ ನಕಲಿ ಐಡಿ ಕಾರ್ಡ್‌ಗಳನ್ನು ಮತ್ತು ಒಂದು ಜೊತೆ ಪಿಎಸ್‌ಐ ಸಮವಸ್ತ್ರ, ಪೊಲೀಸ್ ಶೂಸ್, ಲೋಗೋ, ಮೆಡಲ್, ಬೆಲ್ಟ್, ಕ್ಯಾಪ್, 1 ಲ್ಯಾಪ್ ಮತ್ತು 2 ಮೊಬೈಲ್ ಸೆಟ್‌ಗಳನ್ನು ವಶಪಡಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕಾಲೇಜಿನಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಲಭಿಸಿದ ಮಾಹಿತಿ ಮೇರೆಗೆ ಪರಿಶೀಲನೆ ನಡೆಸಿದಾಗ ಆರೋಪಿ ಪತ್ತೆಯಾಗಿದ್ದಾನೆ.


ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಅವರ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಅಂಶು ಕುಮಾರ್ ಹಾಗೂ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ನಗರ ಸೆಂಟ್ರಲ್ ಉಪ ವಿಭಾಗದ ಎಸಿಪಿ ಮಹೇಶ್ ಕುಮಾರ್ ಅವರ ಸೂಚನೆಯಿಂದ ಉರ್ವ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net