

ಮಂಗಳೂರು : ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸೇವಿಸಿದ ಆರೋಪದಲ್ಲಿ ಮಂಗಳೂರು ಉತ್ತರ ಠಾಣಾ ಪೊಲೀಸರು ಶನಿವಾರದಂದು ಓರ್ವನನ್ನು ಬಂಧಿಸಿದ್ದಾರೆ.
ಕೇರಳದ ಮಹಮ್ಮದ್ ಶಾಮಿಲ್ (24) ಬಂಧಿತ ಆರೋಪಿ. ಜೂ.15ರಂದು ಸಂಜೆ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಹಂಪನಕಟ್ಟೆ ಬಳಿ ಅಮಲು ಪದಾರ್ಥ ಸೇವಿಸಿದ ಹಾಗೆ ತೂರಾಡುತ್ತಿದ್ದ ಶಾಮಿಲ್‌ನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.