

ಮಂಗಳೂರು: ವಿದ್ಯಾರ್ಥಿ ಜೀವನದಲ್ಲಿ ಸಿಗುವ ಅವಕಾಶಗಳನ್ನು ಸರಿಯಾಗಿ ಸದುಪಯೋಗ ಪಡಿಸಿಕೊಂಡರೆ, ಮುಂದಿನ ಭವಿಷ್ಯದಲ್ಲಿ ಉತ್ತಮ ನಾಯಕರಾಗಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.
ಶ್ರೀ ಗೋಕರ್ಣನಾಥೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟಿಸಿ ಅವರು ಮಾತನಾಡಿದರು.
ಕಾಲೇಜಿನ ಹಿರಿಯ ವಿದ್ಯಾರ್ಥಿ ವಿಷ್ಣು ಬಿ.ಎಲ್. ಮಾತನಾಡಿ ವಿದ್ಯಾರ್ಥಿಯು ಶಿಕ್ಷಣದ ಜೊತೆಗೆ ಉತ್ತಮ ಛಲ ಹೊಂದಿರಬೇಕು ಹಾಗೂ ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಸಹಕಾರಿಯಾಗಿದೆ ಎಂದರು.
ಕಾಲೇಜಿನ ಸಂಚಾಲಕ ವಸಂತ್ ಕಾರಂದೂರ್, ಶಿವ ಭಕ್ತಿ ಯೋಗ ಸಂಘದ ಉಪಾದ್ಯಕ್ಷರು ಡಾ.ಬಿ ಜಿ ಸುವರ್ಣ , ಸಂಘದ ಸದಸ್ಯರು ಜಯರಾಂ ಕಾರಂದೂರ್ , ಗೋಕರ್ಣನಾಥೇಶ್ವರ ಕಾಲೇಜಿನ ಆಡಳಿತ ಅಧಿಕಾರಿ ನಾಗೇಶ್ ಕರ್ಕೇರ , ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಜಯಪ್ರಕಾಶ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಘುರಾಜ್ ಕದ್ರಿ, ವಿದ್ಯಾರ್ಥಿ ಸಂಘದ ಸಲಹೆಗಾರರಾದ ವನಿತಾ ಶೆಟ್ಟಿ , ಪದಾಧಿಕಾರಿಗಳಾದ ಮನ್ವಿತ್ ಕೆ ವಿ , ಮೋಕ್ಷ ಬಿ ನಾಯ್ಕ , ಮಧು ಕುಮಾರಿ ಉಪಸ್ಥಿತರಿದ್ದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ದಿವ್ಯಾ ಯು ನಿರೂಪಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಭಾರತಿ ವಂದಿಸಿದರು.