ಅಕ್ಟೋಬರ್ ಅಂತ್ಯಕ್ಕೆ ಮಂಗಳೂರು-ಗೋವಾ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು

vande
Published on

ಮಂಗಳೂರು: ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ.


ಪ್ರತಿ ದಿನ ಮುಂಜಾನೆ ಸುಬ್ರಹ್ಮಣ್ಯ ರಸ್ತೆಯಿಂದ ಹೊರಟು ಮಂಗಳೂರಿಗೆ ಹಾಗೂ ಸಂಜೆ ಮಂಗಳೂರಿನಿಂದ ಸುಬ್ರಹ್ಮಣ್ಯ ರಸ್ತೆಗೆ ಪ್ಯಾಸೆಂಜರ್ ರೈಲು ಒದಗಿಸಲು ಸಚಿವರಿಗೆ ಸಂಸದರು ಮನವಿ ಸಲ್ಲಿಸಿದ್ದಾರೆ. ಸಚಿವರು ಸುಬ್ರಹ್ಮಣ್ಯ ರೋಡ್- ಮಂಗಳೂರು ಪ್ಯಾಸಂಜರ್ ರೈಲು ಆರಂಭಿಸುವ ಭರವಸೆ ನೀಡಿದ್ದಾರೆ. ದಕ್ಷಿಣ ರೈಲ್ವೆಯ ಪಾಲಕ್ಕಾಡು ವಿಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಭಾಗವನ್ನು ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರಿಸಬೇಕೆಂಬ ಮನವಿಗೆ ಸಚಿವರು ಈಗಾಗಲೇ ಈ ಕುರಿತು ಅಗತ್ಯವಾದ ಸೂಚನೆಯನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.


ದಕ್ಷಿಣ ರೈಲ್ವೆ ಹಾಗೂ ಕೊಂಕಣ ರೈಲ್ವೆಗಳ ವಿಭಾಗಳ ನಡುವೆ ಸಂಚರಿಸುವ ರೈಲುಗಳ ಅನಗತ್ಯ ವಿಳಂಬವನ್ನು ನಿವಾರಣೆಯ ಬಗ್ಗೆ ಸಂಸದರು ಸಚಿವರ ಗಮನ ಸೆಳೆದಾಗ ಈ ಕುರಿತು ಅನಗತ್ಯ ವಿಳಂಬವನ್ನು ನಿವಾರಣೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ರೈಲ್ವೆ ಸಚಿವರು ಸೂಚಿಸಿದ್ದಾರೆ ಎಂದು ಸಂಸದರ ಕಚೇರಿ ಪ್ರಕಟಣೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net