

ಮಂಗಳೂರು: ನಗರದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸುರಿಯುತ್ತಿದ್ದು, ಶನಿವಾರ ಹಲವೆಡೆ ಮನೆ, ಸಂಪರ್ಕ ರಸ್ತೆಗಳು ಜಲಾವೃತಗೊಂಡಿವೆ.
ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣ ಮುಂಭಾಗ, ಕದ್ರಿಕಂಬಳ ಸಹಿತ ಹಲವೆಡೆ ಸಂಪರ್ಕ ರಸ್ತೆಗಳಲ್ಲಿ ಸಂಚರಿಸಲು ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಪಾಂಡೇಶ್ವರ ಶಿವನಗರ ಭಾಗದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಕಷ್ಟಪಡುತ್ತಿದ್ದಾರೆ.