ಭಾರತೀಯ ವೈದ್ಯಕೀಯ ಸಂಘ, ದ.ಕ. ಜಿಲ್ಲಾ ಶಾಖೆಯಿಂದ ಪ್ರತಿಭಟನೆ

mng--16 Aug IMA protest
Published on

ಮಂಗಳೂರು : ಕಲ್ಕತಾ ನಗರದಲ್ಲಿ ಕಾರ್ಯಾಚರಿಸುತ್ತಿರುವ ಆರ್. ಜೆ. ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ರಾತ್ರಿ ಸಮಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮತ್ತು ವೈದ್ಯಕೀಯ ಸೇವೆ ಸಲ್ಲಿಸುತ್ತಿದ್ದ ಮಹಿಳಾ ವೈದ್ಯರ ಮೇಲೆ ಹಿಂಸಾತ್ಮಕ ಕೃತ್ಯ, ಲೈಂಗಿಕ ದೌರ್ಜನ್ಯ ಮತ್ತು ಸಾಮೂಹಿಕ ಅತ್ಯಾಚಾರ ಎಸಗಿ ಭೀಕರ ಕೊಲೆ ಮಾಡಿದ ಪ್ರಕರಣವನ್ನು ಖಂಡಿಸಿ ನಗರದ ಭಾರತೀಯ ವೈದ್ಯಕೀಯ ಸಂಘ, ದ.ಕ. ಜಿಲ್ಲಾ ಶಾಖೆಯ ಸುಮಾರು 400 ವೈದ್ಯ ತಂಡದವರು ತಮ್ಮ ಕಛೇರಿಯ ಮುಂಭಾಗದಲ್ಲಿ ಮೊಂಬತ್ತಿ ಬೆಳಗಿಸಿ ಮಾನವ ಸರಪಳಿ ನಿರ್ಮಿಸಿ ಮುಷ್ಕರ ನಡೆಸಿದರು.


ಈ ಪ್ರತಿಭಟನೆಯ ಮುಂದಾಳತ್ವವನ್ನು ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಶಾಖೆಯ ಅಧ್ಯಕ್ಷ ಡಾ. ರಂಜನ್ ಆರ್. ಕೆ., ಕಾರ್ಯದರ್ಶಿ ಡಾ. ಅವಿನ್ ಆಳ್ವ, ಕೋಶಾಧಿಕಾರಿ ಡಾ. ಪ್ರಶಾಂತ್, ಉಪಾಧ್ಯಕ್ಷ ಡಾ. ಮಹಾಬಲೇಶ್ ಶೆಟ್ಟಿ, ಚುನಾಯಿತ ಅಧ್ಯಕ್ಷೆ ಡಾ. ಜೆಸ್ಸಿ ಮೇರಿ ಡಿಸೋಜ, ಮಹಿಳಾ ವಿಭಾಗದ ಅಧ್ಯಕ್ಷೆ ಡಾ. ಪ್ರಭಾ ಅಧಿಕಾರಿ, ಮಾಜಿ ಅಧ್ಯಕ್ಷರಾದ ಡಾ. ಎಮ್.ವಿ. ಪ್ರಭು, ಡಾ. ಕೆ.ಆರ್. ಕಾಮತ್, ಡಾ. ಅಣ್ಣಯ್ಯ ಕುಲಾಲ್ ಮತ್ತು ಭಾರತೀಯ ವೈದ್ಯಕೀಯ ಸಂಘ ಪ್ರತಿಷ್ಟಾನದ ಅಧ್ಯಕ್ಷ ಡಾ. ದಿವಾಕರ್ ರಾವ್ ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net