ಮಂಗಳೂರು ಅಂ.ರಾ. ವಿಮಾನ ನಿಲ್ದಾಣ 70.02 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ

mng--19 Nov Gold 2
Published on

ಮಂಗಳೂರು : ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಅಕ್ರಮ ಸಾಗಾಟ ಮಾಡುತ್ತಿದ್ದ ಒಟ್ಟು 1170 ಗ್ರಾಂ ತೂಕದ 70,02,568 ರೂ. ಮೌಲ್ಯದ ಚಿನ್ನ ವಶಕ್ಕೆ ಪಡೆದಿದ್ದಾರೆ.


ನ.9ರಂದು ಇಂಡಿಗೋ ವಿಮಾನದಲ್ಲಿ ಮತ್ತು ನ.13 ರಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಇಬ್ಬರನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.


ಈ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ 21.6/24 ಕ್ಯಾರೆಟ್ ಚಿನ್ನವನ್ನು ಟ್ರಾಲಿ ಬ್ಯಾಗ್‌ನಲ್ಲಿ ಮಣಿ ಹಾಕುವ ರಾಡ್‌ಗಳ ರೂಪದಲ್ಲಿ, ವಾಚ್, ಬಾಲ್-ಪಾಯಿಂಟ್ ಪೆನ್, ಹೇರ್ ಟ್ರಿಮ್ಮರ್, ಸ್ಟೀಲ್ ವೂಲ್ ಸ್ಕೂರರ್ ಮತ್ತು ಒಂದು ರೋಡಿಯಂ ಲೇಪಿತ ನಾಣ್ಯ ವಶಕ್ಕೆ ಪಡೆದಿದ್ದಾರೆ. ಅಧಿಕಾರಿಗಳು ಒಟ್ಟು 322 ಗ್ರಾಂ ತೂಕದ 18,17,718 ರೂ. ಮೌಲ್ಯದ ಚಿನ್ನದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.


ಇನ್ನೊಂದು ಪ್ರಕರಣದಲ್ಲಿ ನ.18ರಂದು ಅಧಿಕಾರಿಗಳು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಚೆಕ್-ಇನ್ ಬ್ಯಾಗೇಜ್ ತಪಾಸಣೆ ಮಾಡಲಾಗಿತ್ತು.


ಈ ವೇಳೆ ಕೆಲವು ಕಪ್ಪು ಚಿತ್ರಗಳು ಭಾರೀ ಲೋಹದ ಇರುವಿಕೆಯನ್ನು ಸೂಚಿಸುವ ವಸ್ತುಗಳು ಕಂಡುಬಂದಿದ್ದು, ಪರಿಶೀಲನೆ ನಡೆಸಿದಾಗ ಎರಡು ಕಾರ್ ಸ್ಪೀಕರ್ ಗಳಲ್ಲಿ 2 ವೃತ್ತಾಕಾರದ ತುಂಡುಗಳು, ಏರ್‌ಪಾಡ್‌ನಲ್ಲಿ 2 ಆಯತಾಕಾರದ ಕಟ್ ತುಂಡುಗಳು ಮತ್ತು ಪವರ್ ಅಡಾಪ್ಟರ್ ನಲ್ಲಿ ಒಂದು ಆಯತಾಕಾರದ ಚಿನ್ನದ ತುಂಡು ಪತ್ತೆಯಾಗಿದೆ. ಒಟ್ಟು 51,84,850 ರೂ. ಮೌಲ್ಯದ 24 ಕ್ಯಾರೆಟ್ ಪರಿಶುದ್ಧತೆಯ 857 ಗ್ರಾಂ ತೂಕದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net